HomeLatest Newsಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳ್ಳಾರಿಗೆ ಭೇಟಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳ್ಳಾರಿಗೆ ಭೇಟಿ

ಬಳ್ಳಾರಿ: ಭಾರತ ಸರ್ಕಾರದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 16 ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಮಧ್ಯಾಹ್ನ 1.45ಕ್ಕೆ ಸಿರುಗುಪ್ಪ ತಾಲ್ಲೂಕಿನ ಬಾಗೇವಾಡಿ ಗ್ರಾಮದ ಗ್ರಾಮ ಪಂಚಾಯತ್ ನ ಗ್ರಂಥಾಲಯಕ್ಕೆ ಭೇಟಿ ನೀಡುವರು.

ಬಳಿಕ ಮಧ್ಯಾಹ್ನ 3 ಗಂಟೆಗೆ ಸಿರುಗುಪ್ಪ ತಾಲ್ಲೂಕಿನ ಕೊಂಚಿಗೇರಿ ಗ್ರಾಮದಲ್ಲಿ ಏರ್ಪಡಿಸಿರುವ ಸಂಸದೀಯ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ ರೈತರಿಗೆ ಸ್ಥಳೀಯ ಕೃಷಿ ತರಬೇತಿ ಕೇಂದ್ರ ಮತ್ತು ಕೃಷಿ ಸಂಸ್ಕರಣೆ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರ ಸಂಜೆ 4.45ಕ್ಕೆ ಬಳ್ಳಾರಿ ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಮುಖ್ಯ ಕಚೇರಿಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಪ್ರಗತಿ ಪರಿಶೀಲನೆ ನಡೆಸುವರು. ಬಳಿಕ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.

ಅ.17 ರಂದು ಬಳ್ಳಾರಿಯಿಂದ ವಿಜಯನಗರ ಜಿಲ್ಲೆಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular