HomeKarnatakaಚಿಕ್ಕಬಳ್ಳಾಪುರ ಜಿಲ್ಲೆಗೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ

ಚಿಕ್ಕಬಳ್ಳಾಪುರ ಜಿಲ್ಲೆಗೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೂ. 184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ ಸಿಗಲಿದೆ ಎಂದು ಚಿಕ್ಕಬಳ್ಳಾಪುರ ಸಂಸದ, ಮಾಜಿ ಸಚಿವ ಡಾ.ಕೆ.ಸುಧಾಕರ್ ಪೋಸ್ಟ್ ಹಾಕಿದ್ದಾರೆ.

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, ‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಸಲ್ಲಿಸಲಾದ ರೂ. 184 ಕೋಟಿ ಮೊತ್ತದ ಈ ಪ್ರಸ್ತಾವನೆಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ಒಂದು ತಿಂಗಳೊಳಗೆ ಅನುಮೋದನೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಪೋಸ್ಟ್‌ನಲ್ಲಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶ್ರೀಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಸುಸಜ್ಜಿತ ಮೂಲಸೌಕರ್ಯ, ನೈರ್ಮಲ್ಯ ಮತ್ತು ಆಧುನಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಈ ಪವಿತ್ರ ಕ್ಷೇತ್ರವನ್ನು ಮಾದರಿ ಯಾತ್ರಾಸ್ಥಳವಾಗಿ ರೂಪಿಸುವುದು ನನ್ನ ಗುರಿಯಾಗಿದೆ.

ಈ ಪ್ರಯತ್ನಕ್ಕೆ ಬೆಂಬಲ ಮತ್ತು ಪ್ರೋತ್ಸಾಹ ನೀಡುತ್ತಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು ಎಂದು ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular