ಕೇಂದ್ರದಿಂದ ಹೊಸ ನಿಯಮ: ಒಟಿಟಿ ಪ್ಲಾಟ್ ಫಾರ್ಮ್ ಗಳಲ್ಲಿ ತಂಬಾಕು ಅಪಾಯದ ಎಚ್ಚರಿಕೆ ಕಡ್ಡಾಯ

ನವದೆಹಲಿ: ಒಟಿಟಿ ಪ್ಲಾಟ್‌ ಫಾರ್ಮ್‌ ಗಳಲ್ಲಿ ತಂಬಾಕು ಸೇವನೆಯಿಂದ ಆಗುವ ಹಾನಿ ಬಗ್ಗೆ ಎಚ್ಚರಿಕೆ ನೀಡಲು ಕೇಂದ್ರ ಆರೋಗ್ಯ ಸಚಿವಾಲಯವು ಹೊಸ ನಿಯಮಗಳನ್ನು ಸೂಚಿಸಿದೆ.

ಅಧಿಸೂಚನೆ ಪ್ರಕಾರ, ಒಟಿಟಿ ಪ್ಲಾಟ್‌ ಫಾರ್ಮ್‌ ಗಳಲ್ಲಿ ತಂಬಾಕು ಉತ್ಪನ್ನಗಳಿಂದಾಗುವ ಹಾನಿಯ ಎಚ್ಚರಿಕೆ ಸಂದೇಶಗಳನ್ನು ತೋರಿವುದನ್ನು ಕಡ್ಡಾಯ ಮಾಡಲಾಗಿದೆ. ಪ್ರತಿಯೊಬ್ಬ ಪ್ರಕಾಶಕರು ಕಾರ್ಯಕ್ರಮದ ಪ್ರಾರಂಭ ಮತ್ತು ಮಧ್ಯದಲ್ಲಿ ಕನಿಷ್ಠ 30 ಸೆಕೆಂಡುಗಳ ಅವಧಿಯ ತಂಬಾಕು ವಿರೋಧಿ ಮಾಹಿತಿ ಪ್ರದರ್ಶಿಸಬೇಕು.

ಆನ್‌ಲೈನ್ ಕಂಟೆಂಟ್‌ನ ಪ್ರಕಾಶಕರು ಹೊಸ ನಿಯಮಗಳನ್ನು ಅನುಸರಿಸಲು ವಿಫಲವಾದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಆರೋಗ್ಯ ಸಚಿವಾಲಯ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದ ಪ್ರತಿನಿಧಿಗಳನ್ನು ಒಳಗೊಂಡಿರುವ ಅಂತರ-ಸಚಿವಾಲಯ ಸಮಿತಿಯು ಸ್ವಯಂಪ್ರೇರಿತವಾಗಿ ಅಥವಾ ದೂರಿನ ಮೇಲೆ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಲಾಗಿದೆ.

ಇಂದು ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, 2023 ರ ಜಾಗತಿಕ ಅಭಿಯಾನವು ತಂಬಾಕು ರೈತರಿಗೆ ಪರ್ಯಾಯ ಬೆಳೆ ಉತ್ಪಾದನೆ ಮತ್ತು ಮಾರುಕಟ್ಟೆ ಅವಕಾಶಗಳ ಬಗ್ಗೆ ಅರಿವು ಮೂಡಿಸಲು ಮತ್ತು ಪೌಷ್ಟಿಕ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read