HomeLatest NewsBREAKING : DCM ಅಜಿತ್ ಪವಾರ್ ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವ ಅಮಿತ್ ...

BREAKING : DCM ಅಜಿತ್ ಪವಾರ್ ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ಹಲವರು ಭಾಗಿ |WATCH VIDEO

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯು ಗುರುವಾರ ಇಂದು (ಜನವರಿ 29, 2026) ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ  ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.  ಅಜಿತ್ ಪವಾರ್ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.

ಬುಧವಾರ ಬೆಳಿಗ್ಗೆ ಮುಂಬೈನಿಂದ ಹೊರಟಿದ್ದ ಅವರ ಖಾಸಗಿ ವಿಮಾನವು ಬಾರಾಮತಿ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿತ್ತು. ಈ ದುರಂತದಲ್ಲಿ ಅಜಿತ್ ಪವಾರ್ ಅವರೊಂದಿಗೆ ಪೈಲಟ್ ಹಾಗೂ ಸಿಬ್ಬಂದಿ ಸೇರಿ ಐವರು ಸಾವನ್ನಪ್ಪಿದ್ದರು. ಅಜಿತ್ ಪವಾರ್ ಅವರ ನಿಧನಕ್ಕೆ ದೇಶದಾದ್ಯಂತ ರಾಜಕೀಯ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular