HomeKarnatakaಕೇರಳದಲ್ಲಿ ಭೀಕರ ಭೂಕುಸಿತ ; ಶೋಕ ವ್ಯಕ್ತಪಡಿಸಿದ ಕೇಂದ್ರ ಸಚಿವ H.D ಕುಮಾರಸ್ವಾಮಿ

ಕೇರಳದಲ್ಲಿ ಭೀಕರ ಭೂಕುಸಿತ ; ಶೋಕ ವ್ಯಕ್ತಪಡಿಸಿದ ಕೇಂದ್ರ ಸಚಿವ H.D ಕುಮಾರಸ್ವಾಮಿ

ಬೆಂಗಳೂರು : ಕೇರಳದಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಶೋಕ ವ್ಯಕ್ತಪಡಿಸಿದ್ದಾರೆ.

ದುರಂತದ ಬಗ್ಗೆ ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ  ”ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ.

”ಗೌರವಾನ್ವಿತ ಪ್ರಧಾನಿಗಳಾದ ಮೋದಿ ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಮುಖ್ಯಮಂತ್ರಿಗಳ ಜತೆ ಮಾತನಾಡಿ, ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಮಾನ್ಯ ಪ್ರಧಾನಿಗಳನ್ನು ನಾನು ಅಭಿನಂದಿಸುತ್ತೇನೆ. ಈ ದುರಂತದಲ್ಲಿ ಸಾವನ್ನಪ್ಪಿದವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಎಲ್ಲಾ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಕೇರಳ ಸೇರಿ ದೇಶದೆಲ್ಲೆಡೆ ಭಾರೀ ಮಳೆ ಆಗುತ್ತಿದ್ದು, ಭೂಕುಸಿತ, ನೆರೆ ಉಂಟಾಗಿದೆ. ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು ಹಾಗೂ ರಾಜ್ಯ ಸರಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು” ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular