HomeLive Newsಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಎಸ್ಐಟಿ ಸಂಕಷ್ಟ: ಮತ್ತೆ ತನಿಖೆ ಬಿಸಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಎಸ್ಐಟಿ ಸಂಕಷ್ಟ: ಮತ್ತೆ ತನಿಖೆ ಬಿಸಿ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಸಮೀಪ ಕೇತುಗಾನಹಳ್ಳಿಯಲ್ಲಿ ಒತ್ತುವರಿ ಮಾಡಿದ್ದಾರೆ ಎನ್ನಲಾದ 14 ಎಕರೆ ಸರ್ಕಾರಿ ಜಮೀನು ಕುರಿತು ವಿಚಾರಣೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದ್ದ ಸರ್ಕಾರದ ಆದೇಶ ಮತ್ತು ಕುಮಾರಸ್ವಾಮಿಯವರಿಗೆ ರಾಮನಗರ ತಹಶೀಲ್ದಾರ್ ಜಾರಿ ಮಾಡಿದ್ದ ಸಮನ್ಸ್ ಗೆ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ಸೋಮವಾರ ತಡೆ ಹಿಡಿದಿದೆ.

ಇದರಿಂದಾಗಿ ಪ್ರಕರಣದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಎಸ್ಐಟಿಯ ವಿಚಾರಣೆ ಮುಂದುವರೆಸಲು ಹಾದಿ ಸುಗಮವಾಗಿದೆ. ಎಸ್ಐಟಿ ರಚಿಸಿ 2025ರ ಜನವರಿ 28ರಂದು ಹೊರಡಿಸಲಾದ ಆದೇಶ ಮತ್ತು ಪ್ರಕರಣ ಕುರಿತು ರಾಮನಗರ ತಹಶೀಲ್ದಾರ್ ಮೇ 29ರಂದು ಹೊರಡಿಸಿದ್ದ ಸಮನ್ಸ್ ರದ್ದು ಕೋರಿ ಹೆಚ್‍.ಡಿ. ಕುಮಾರಸ್ವಾಮಿ ಹೈಕೀರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್ ಏಕ ಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿ ಸಮನ್ಸ್ ಗೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿತ್ತು. ತಡೆಯಾಜ್ಞೆ ರದ್ದು ಕೋರಿ ರಾಜ್ಯ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು, ಸೋಮವಾರ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ವಿಚಾರಣೆ ನಡೆಸಿದೆ. ಮೇಲ್ಮನವಿಯ ಮುಂದಿನ ವಿಚಾರಣೆಯವರೆಗೆ ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಲಾಗಿದೆ. ಪ್ರತಿವಾದಿ ಹೆಚ್.ಡಿ. ಕುಮಾರಸ್ವಾಮಿಗೆ ನೋಟಿಸ್ ಜಾರಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular