HomeKarnatakaಕೇಂದ್ರ ಸಚಿವ HDK, ಎಡಿಜಿಪಿ ಚಂದ್ರಶೇಖರ್ ಪ್ರಕರಣ ರಾಜಿ ಸಂಧಾನಕ್ಕೆ ನಿವೃತ್ತ ನ್ಯಾಯಮೂರ್ತಿ ಎ. ಎಸ್....

ಕೇಂದ್ರ ಸಚಿವ HDK, ಎಡಿಜಿಪಿ ಚಂದ್ರಶೇಖರ್ ಪ್ರಕರಣ ರಾಜಿ ಸಂಧಾನಕ್ಕೆ ನಿವೃತ್ತ ನ್ಯಾಯಮೂರ್ತಿ ಎ. ಎಸ್. ಓಕಾ ನೇಮಕ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ, ಎಸ್ಐಟಿ ಮುಖ್ಯಸ್ಥ ಎಂ. ಚಂದ್ರಶೇಖರ್ ನೀಡಿದ ದೂರಿಗೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣದ ರಾಜಿ ಸಂಧಾನಕ್ಕೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ(ಎ.ಎಸ್. ಓಕಾ) ಅವರನ್ನು ನೇಮಕ ಮಾಡಿ ಹೈಕೋರ್ಟ್ ಆದೇಶಿಸಿದೆ.

ಸಂಜಯನಗರ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಪಡಿಸುವಂತೆ ಕೋರಿ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ಗುರುವಾರ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆದಿದೆ.

ನ್ಯಾಯಮೂರ್ತಿ ಎ.ಎಸ್. ಓಕಾ ಅವರ ನೇಮಕಕ್ಕೆ ಉಭಯ ಪಕ್ಷಗಾರರು ಒಪ್ಪಿಗೆ ಸೂಚಿಸಿದ್ದು, ಇವರ ಗೌರವಧನ ಮತ್ತು ವೆಚ್ಚದ ಕುರಿತು ಪಕ್ಷಗಾರರು ನಿರ್ಧರಿಸಿಕೊಳ್ಳಬಹುದಾಗಿದೆ. ಮಧ್ಯಸ್ಥಿಕೆಯ ಸ್ಥಳ ಮತ್ತು ಇತರೆ ಅಂಶಗಳನ್ನು ಆದೇಶದಲ್ಲಿ ಉಲ್ಲೇಖಿಸಲಾಗುವುದು ಎಂದು ನ್ಯಾಯಪೀಠ ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಮಾರಸ್ವಾಮಿ ಪರ ಹಿರಿಯ ವಕೀಲ ಅಸ್ಮತ್ ಪಾಷ, ಚಂದ್ರಶೇಖರ್ ಪರ ಹೈಕೋರ್ಟ್ ವಕೀಲ ಹಿದಾಯತ್ ಉಲ್ಲಾ ಹಾಜರಾಗಿದ್ದರು. ಕುಮಾರಸ್ವಾಮಿ ನನ್ನ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎಂದು 2024ರಲ್ಲಿ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್ ದೂರು ದಾಖಲಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular