ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಪ್ರಚಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪ್ರಚಾರಕ್ಕೆ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮನವಿ ಮಾಡಿದ್ದಾರೆ. ದೂರವಾಣಿ ಮೂಲಕ ಹೆಚ್.ಡಿ.ಕೆ. ಅವರೊಂದಿಗೆ ಮಾತನಾಡಿದ್ದು, ಏಪ್ರಿಲ್ 1ರ ನಂತರ ಪ್ರಚಾರಕ್ಕೆ ಬರುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ಜೆಡಿಎಸ್ ಪಕ್ಷದ ಸ್ಥಳೀಯ ಮುಖಂಡರು ಭಾಗವಹಿಸಿದ್ದರು. ಈಗ ಪ್ರಚಾರಕ್ಕೆ ಬರುವಂತೆ ಕುಮಾರಸ್ವಾಮಿಯವರಿಗೆ ಮನವಿ ಮಾಡಿದ್ದು, ಏಪ್ರಿಲ್ 1ರ ನಂತರ ಪ್ರಚಾರಕ್ಕೆ ಸಮಯ ನೀಡುವುದಾಗಿ ಹೇಳಿದ್ದಾರೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

