HomeLatest Newsದೆಹಲಿಯಲ್ಲಿ ಕೇಂದ್ರ ಸಚಿವ ‘ಕಿಂಜರಾಪು ರಾಮಮೋಹನ ನಾಯ್ಡು’ ಭೇಟಿಯಾಗಿ  ಮನವಿ ಪತ್ರ ನೀಡಿದ ಸಿಎಂ ಸಿದ್ದರಾಮಯ್ಯ.!

ದೆಹಲಿಯಲ್ಲಿ ಕೇಂದ್ರ ಸಚಿವ ‘ಕಿಂಜರಾಪು ರಾಮಮೋಹನ ನಾಯ್ಡು’ ಭೇಟಿಯಾಗಿ  ಮನವಿ ಪತ್ರ ನೀಡಿದ ಸಿಎಂ ಸಿದ್ದರಾಮಯ್ಯ.!

ನವದೆಹಲಿ : ದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಅವರು ಎಕ್ಸ್ ಖಾತೆಯಲ್ಲಿ ಟ್ವೀಟ್ ಹಂಚಿಕೊಂಡಿದ್ದಾರೆ. ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರಿಗೆ ನೀಡಿದ ಪತ್ರದ ವಿವರ ಹೀಗಿದೆ.

ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (v) ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯ ವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು. ಅದರಂತೆ, ಅಗತ್ಯವಿರುವ ಭೂಮಿಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ವರ್ಗಾಯಿಸಲಾಗಿದೆ. ಒಪ್ಪಂದದ ಷರತ್ತು ಬಿ 2 (VI) ಪ್ರಕಾರ, ನಿಯೋಜಿತರು ಮೈಸೂರು ವಿಮಾನ ನಿಲ್ದಾಣದ ಹೆಚ್ಚಿನ ಅಭಿವೃದ್ಧಿಯ ಬಂಡವಾಳ ವೆಚ್ಚ, ಮಾರ್ಪಾಡುಗಳು, ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಎಲ್ಲಾ ವೆಚ್ಚಗಳನ್ನು ಭರಿಸಬೇಕು. ಅದರಂತೆ, ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಅಗತ್ಯವಿರುವ ಬಂಡವಾಳ ಹಾಗೂ ಇನ್ನಿತರೆ ವೆಚ್ಚಗಳನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವೇ ಭರಿಸಬೇಕಿದೆ. ಈ ಹಿನ್ನೆಲೆಯಲ್ಲಿ, ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯವಿರುವ 240 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು 319.14 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಭೂ ಸ್ವಾಧೀನ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ ಎಂದರು.

ನವೆಂಬರ್ 2024 ರಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತವು(ಸಿ. ಎನ್.ಎನ್.ಎಲ್) ವಿಮಾನ ನಿಲ್ದಾಣ ವಿಸ್ತರಣೆ ಪ್ರದೇಶದಲ್ಲಿ ಎರಡು ಕಂದಕಗಳ ಮತ್ತು 7 ಕಾಲುವೆಗಳ ಸ್ಥಳಾಂತರಕ್ಕೆ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ ₹70 ಕೋಟಿಗಳ ವೆಚ್ಚವಾಗಲಿದೆ. ಅಂತೆಯೇ, ಕೆ.ಪಿ.ಟಿ.ಸಿಎಲ್ ಕೂಡ ಹೈ-ಟೆನ್ಷನ್ ಲೈನ್ ಗಳ ಮತ್ತು ಚೆಸ್ಕಾಂ ಲೋ ಟೆನ್ಶನ್ ವೈರ್ ಗಳ ಮಾರ್ಗ ಬದಲಾವಣೆಗೆ 31.82 ಕೋಟಿಗಳ ಅಂದಾಜು ವೆಚ್ಚವಾಗಲಿದೆ ಎಂದು ತಿಳಿಸಿದ್ದು, ಒಟ್ಟಾರೆ ಸದರಿ ಕಾಮಗಾರಿಗೆ 101.82 ಕೋಟಿಗಳ ಅನುದಾನದ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಆದ್ದರಿಂದ, ರಾಜ್ಯ ಸರ್ಕಾರವು ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 240 ಎಕರೆ ಭೂ ಸ್ವಾಧೀನಕ್ಕೆ ತಗಲುವ 319.14 ಕೋಟಿ ವೆಚ್ಚವನ್ನು ಭರಿಸಿದ್ದು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ವಿಸ್ತರಣೆಯ ಅಂದಾಜು ವೆಚ್ಚ 101.84 ಕೋಟಿಗಳ ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಕೋರಿದ್ದೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular