ಬೆಂಗಳೂರು : ಟೂರ್ನಿಯಲ್ಲಿ ಐತಿಹಾಸಿಕ ದ್ವಿಗಿಜಯ ಸಾಧಿಸಿದ ಆರ್ ಸಿ ಬಿ ತಂಡಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ. ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಗೆಲುವು ಮಹೋನ್ನತ ಮೈಲುಗಲ್ಲು ಎಂಬುದು ನನ್ನ ಅಭಿಪ್ರಾಯ. ಮುಖ್ಯವಾಗಿ 18 ವರ್ಷಗಳಷ್ಟು ಸುದೀರ್ಘ ಕಾಲ ತಂಡ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡ ಹಿರಿಯ ಆಟಗಾರ ಕೊಹ್ಲಿ ಅವರನ್ನು ಅಭಿನಂದಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

