ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ P.A ಸೋಗಿನಲ್ಲಿ M.S ಧೋನಿ ಮ್ಯಾನೇಜರ್ ಗೆ ಲಕ್ಷಾಂತರ ಹಣ ವಂಚನೆ..!

ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ವಿಶೇಷ ದರ್ಶನ ಮಾಡಿಸುತ್ತೇನೆಂದು ನಂಬಿಸಿ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಧೋನಿ ಮ್ಯಾನೇಜರ್ಗೆ ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸುತ್ತೇನೆ ಎಂದು ಹೇಳಿ MS  ಧೋನಿ ಅವರ ಮ್ಯಾನೇಜರ್ ಸ್ವಾಮಿನಾಥನ್ ಅವರಿಂದ 6.5 ಲಕ್ಷ ರೂ ಹಣ ವಂಚಿಸಲಾಗಿದೆ. ಈ ಸಂಬಂಧ ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ವಾಮಿನಾಥನ್ ಅವರಿಗೆ ಕರೆ ಮಾಡಿದ ವ್ಯಕ್ತಿಯೋರ್ವ ನಾನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪಿಎ ಎಂದು ಹೇಳಿ ಪರಿಚಯ ಮಾಡಿಕೊಂಡಿದ್ದಾನೆ. ಕೇಂದ್ರ ಹಣಕಾಸು ಸಚಿವರ ಬಳಿ ಆಪ್ತ ಕಾರ್ಯದರ್ಶಿ ಎಂದು ಹೆಸರು ದುರ್ಬಳಕೆ ಮಾಡಿಕೊಂಡು ವಂಚಿಸಲಾಗಿದೆ ಎಂದು ಆರೋಪ ಮಾಡಲಾಗಿದೆ.

ಕಳೆದ ವರ್ಷ ಅಕ್ಟೋಬರ್ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಹನ್ನೆರಡು ಮಂದಿಗೆ ವಿಶೇಷ ದರ್ಶನ ಮಾಡಿಸುತ್ತೇವೆ. ತಿರುಪತಿಯಲ್ಲಿ ಎಲ್ಲಾ ವ್ಯವಸ್ಥೆ ಇರುತ್ತದೆ. ಪ್ರೋಟೋಕಾಲ್ ಮೂಲಕ ಯಾರನ್ನಾದ್ರು ದರ್ಶನಕ್ಕೆ ಕಳುಹಿಸಬಹುದು ಎಂದು ನಂಬಿಸಿದ್ದನು. ನಂತರ ಸ್ವಾಮಿನಾಥನ್. ಸ್ನೇಹಿತರನ್ನ ಕಳಿಸುವ ಉದ್ದೇಶದಿಂದ ಮೂರು ಲಕ್ಷ ಹಣವನ್ನ ಫೋನ್ ಪೇ ಮಾಡಿದ್ದರು . ಸಾಯಿ ಟ್ರಸ್ಟ್ ಹೆಸರಿಗೆ ಮೂರು ಲಕ್ಷ ಹಣ ಪಡೆದಿರುವ ಆರೋಪವಿದೆ. ಹಣ ಪಡೆದು ಹಿಂತಿರುಗಿಸದ ಹಿನ್ನೆಲೆಯಲ್ಲಿ ಸ್ವಾಮಿನಾಥನ್ ಅವರು ಹೆಚ್ಎಸ್ಆರ್ ಲೇಔಟ್ ಠಾಣೆಗೆ ದೂರು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read