HomeLatest NewsBREAKING: ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಸದಂತೆ ಕೇಂದ್ರ ಸಚಿವ ಸೋಮಣ್ಣ ಸೂಚನೆ

BREAKING: ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಸದಂತೆ ಕೇಂದ್ರ ಸಚಿವ ಸೋಮಣ್ಣ ಸೂಚನೆ

ಬೆಂಗಳೂರು: ಕೇಂದ್ರ ಸರ್ಕಾರದ ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಪರೀಕ್ಷೆಯಲ್ಲಿ ಮಂಗಳಸೂತ್ರ ಮತ್ತು ಧರ್ಮದ ಸಂಕೇತಗಳನ್ನು ಧರಿಸದಂತೆ ಸೂಚನೆ ನೀಡಲಾಗಿದೆ.

ರೈಲ್ವೆ ಇಲಾಖೆ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಮಂಗಳವಾರ ದೇಶಾದ್ಯಂತ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ ಪಾಲಿಸಬೇಕಾದ ಸೂಚನೆಗಳನ್ನು ಪ್ರವೇಶ ಪತ್ರದಲ್ಲಿ ಇಲಾಖೆ ಸ್ಪಷ್ಟವಾಗಿ ನಮೂದಿಸಿದೆ. ಪ್ರವೇಶ ಪತ್ರದ 7ನೇ ಕ್ರಮಾಂಕದ ಸೂಚನೆಯಲ್ಲಿ ಮಂಗಳಸೂತ್ರ, ಧರ್ಮದ ಸಂಕೇತ ಧರಿಸದಂತೆ ಹೇಳಲಾಗಿದೆ. ಇದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಈ ಕುರಿತಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ತಂದಿದ್ದು, ಸಚಿವರು ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಮಂಗಳಸೂತ್ರ ಮತ್ತು ಜನಿವಾರ ತೆಗೆಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಸಂಸದ ಚೌಟ ಮಾಹಿತಿ ನೀಡಿದ್ದಾರೆ. ನಾಳೆ ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಪರೀಕ್ಷೆ ನಿಗದಿಯಾಗಿದ್ದು, ದೇಶಾದ್ಯಂತ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular