HomeLatest NewsBIG NEWS: ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಸಾರ್ವಜನಿಕ ಹುದ್ದೆ ಅಲ್ಲ: ಹೈಕೋರ್ಟ್ ಆದೇಶ

BIG NEWS: ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಸಾರ್ವಜನಿಕ ಹುದ್ದೆ ಅಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕರು ಮತ್ತು ಪ್ರಾಧ್ಯಾಪಕರ ಹುದ್ದೆಯು ಸಾರ್ವಜನಿಕ ಹುದ್ದೆಯನ್ನಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿ ಹೈಕೋರ್ಟ್ ಆದೇಶಿಸಿದೆ.

ಅರ್ಹತೆ ಇಲ್ಲದಿದ್ದರೂ ಬೆಂಗಳೂರು ವಿಶ್ವವಿದ್ಯಾಲಯದ ಜೀವವಿಜ್ಞಾನಗಳ ವಿಭಾಗದ ಪ್ರಾಧ್ಯಾಪಕರ ಹುದ್ದೆಗೆ ಬಡ್ತಿ ಪಡೆದಿರುವ ಡಾ.ಎಂ. ಶಿವಶಂಕರ್ ಅವರನ್ನು ಆ ಹುದ್ದೆಯಿಂದ ತೆರವುಗೊಳಿಸಿ ಆದೇಶಿಸಬೇಕು ಎಂದು ಕೋರಿ ಹೆಚ್.ಟಿ. ಉಮೇಶ್, ಡಾ. ಎಸ್. ಆನಂದ್ ಮತ್ತು ಡಾ.ಹೆಚ್‍.ಪಿ. ಪುಟ್ಟರಾಜು ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದಿಂದ ಈ ಆದೇಶ ನೀಡಲಾಗಿದೆ. ವೈಯಕ್ತಿಕ ಹಿತಾಸಕ್ತಿಯಿಂದ ಈ ಅರ್ಜಿ ಸಲ್ಲಿಸಲಾಗಿದ್ದು, ಕಾನೂನಿನ ದುರ್ಬಳಕೆಯಾಗಿದೆ ಎಂದು ಅಭಿಪ್ರಾಯಪಟ್ಟು ಅರ್ಜಿದಾರರಿಗೆ 7500 ರೂ. ದಂಡ ವಿಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular