ಪರೀಕ್ಷೆಯಲ್ಲಿ ಬೇರೆ ಪ್ರಶ್ನೆ ಪತ್ರಿಕೆ ನೀಡಿ ವಿವಿ ಗೊಂದಲ: ತಪ್ಪು ಅರಿವಾಗಿ ಪರೀಕ್ಷೆ ಮುಂದೂಡಿಕೆ

ಕೊಪ್ಪಳ: ಬಳ್ಳಾರಿ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂರನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಎರಡನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ನೀಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ತೀವ್ರ ಗೊಂದಲಕ್ಕೀಡಾಗಿದ್ದಾರೆ. ಕೊನೆಗೆ ಪರೀಕ್ಷೆಯನ್ನು ಮುಂದುಡಲಾಗಿದೆ.

ಮಂಗಳವಾರ ಸಮಾಜಶಾಸ್ತ್ರ ವಿಷಯದ ಮೂರನೇ ಸೆಮಿಸ್ಟರ್ ಪರೀಕ್ಷೆ ನಿಗದಿಯಾಗಿದ್ದು, ಪ್ರಶ್ನೆ ಪತ್ರಿಕೆ ಬದಲಾಗಿದ್ದರೂ ಪರೀಕ್ಷಾ ಮೇಲ್ವಿಚಾರಕರು ಗಂಭೀರವಾಗಿ ಪರಿಗಣಿಸಿಲ್ಲ. ಇದು ಸರಿಯಾಗಿಯೇ ಇದೆ. ಪರೀಕ್ಷೆ ಬರೆಯಿರಿ ಎಂದು ವಿದ್ಯಾರ್ಥಿಗಳಿಗೆ ಸೂಚಿಸಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ಗಾಬರಿಯಾಗಿದ್ದಾರೆ. ನಂತರ ತಪ್ಪಿನ ಅರಿವಾಗಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಮೇಲೆ ಮಾತ್ರ ಮೂರನೇ ಸೆಮಿಸ್ಟರ್ ಎಂದು ಬರೆಯಲಾಗಿದೆ. ಆದರೆ, ಎರಡನೇ ಸೆಮಿಸ್ಟರ್ ನ ಪ್ರಶ್ನೆಗಳನ್ನು ನೀಡಲಾಗಿದೆ. ಇದು ಗಮನಕ್ಕೆ ಬಂದ ನಂತರ ವಿಶ್ವವಿದ್ಯಾಲಯ ಪರೀಕ್ಷೆಯನ್ನು ಸ್ಥಗಿತಗೊಳಿಸಿ ಸಮಾಜಶಾಸ್ತ್ರ ವಿಷಯದ ಪರೀಕ್ಷೆ ಮುಂದೂಡಲು ನಿರ್ಧರಿಸಿದೆ. ವಿದ್ಯಾರ್ಥಿಗಳಿಗೆ ನೀಡಿದ ಪ್ರಶ್ನೆ ಪತ್ರಿಕೆ ವಾಪಸ್ ಪಡೆದು ವಾಪಸ್ ಕಳುಹಿಸಲಾಗಿದೆ. ಪರೀಕ್ಷೆ ಮುಂದೂಡಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read