HomeAgricultureಅಕಾಲಿಕ ಮಳೆ, ರೈತರಿಗೆ ನಷ್ಟ: ಸರ್ಕಾರದ ಕಿವಿ ಹಿಂಡಿದ ಆರ್.ಅಶೋಕ

ಅಕಾಲಿಕ ಮಳೆ, ರೈತರಿಗೆ ನಷ್ಟ: ಸರ್ಕಾರದ ಕಿವಿ ಹಿಂಡಿದ ಆರ್.ಅಶೋಕ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಬೇಸಿಗೆಯಲ್ಲಿ ಜನರಿಗೆ ನೆಮ್ಮದಿ ನೀಡಿದರೂ ಸಹ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಲಿಕಲ್ಲು, ಗುಡುಗು, ಸಿಡಿಲು ಸಹಿತ ಭಾರೀ ಮಳೆ ಬೆಳೆ ನಷ್ಟಕ್ಕೆ ಕಾರಣವಾಗಿದೆ.

ಈ ಕುರಿತು ಕರ್ನಾಟಕದ ವಿರೋಧ ಪಕ್ಷದ ನಾಯಕ ಆರ್.ಅಶೋಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ‘ರಾಜ್ಯದ ಏಳು ಜಿಲ್ಲೆಗಳಲ್ಲಿ (ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ಹಾಸನ) ಸಂಭವಿಸಿದ ಅಕಾಲಿಕ ಮಳೆಯ ಆರ್ಭಟಕ್ಕೆ ರೈತರು ಮತ್ತು ಜನಸಾಮಾನ್ಯರು ಕಂಗೆಟ್ಟಿದ್ದಾರೆ’ ಎಂದು ಹೇಳಿದ್ದಾರೆ.

‘ಅಡಿಕೆ, ರಬ್ಬರ್ ಹಾಗೂ ತೆಂಗಿನ ಮರಗಳು ಧರಾಶಾಹಿಯಾಗಿವೆ, ಮನೆಗಳು ಹಾನಿಗೊಳಗಾಗಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಕೊಡಲೇ ಪರಿಹಾರ ಕಾರ್ಯ ಕೈಗೊಳ್ಳಬೇಕು’ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  • ತ್ವರಿತ ಸಮೀಕ್ಷೆ: ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ತಕ್ಷಣವೇ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಬೆಳೆ ಹಾನಿ ಮತ್ತು ಆಸ್ತಿ ಪಾಸ್ತಿ ನಷ್ಟದ ಬಗ್ಗೆ ನಿಖರ ಸಮೀಕ್ಷೆ ನಡೆಸಬೇಕು.
  • ಪರಿಹಾರ ಘೋಷಣೆ: ಅಡಿಕೆ, ರಬ್ಬರ್ ಸೇರಿದಂತೆ ವಾಣಿಜ್ಯ ಬೆಳೆಗಳನ್ನು ಕಳೆದುಕೊಂಡ ರೈತರಿಗೆ ವೈಜ್ಞಾನಿಕವಾಗಿ ಹೆಚ್ಚಿನ ಪರಿಹಾರವನ್ನು ಸರ್ಕಾರ ಕೂಡಲೇ ಘೋಷಿಸಬೇಕು.
  • ಮನೆ ಹಾನಿಗೆ ಸಹಾಯ: ಮಳೆಯಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ತಕ್ಷಣದ ತಾತ್ಕಾಲಿಕ ನೆರವು ಹಾಗೂ ಪುನರ್ನಿರ್ಮಾಣಕ್ಕೆ ಧನಸಹಾಯ ನೀಡಬೇಕು.
  • ವಿದ್ಯುತ್ ಸಂಪರ್ಕ ಸರಿಪಡಿಸಿ: ಮರಗಳು ಬಿದ್ದು ವಿದ್ಯುತ್ ಕಂಬಗಳು ಮುರಿದಿರುವ ಕಡೆಗಳಲ್ಲಿ ತುರ್ತಾಗಿ ದುರಸ್ತಿ ಕಾರ್ಯ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.

ರೈತರು ಸಂಕಷ್ಟದಲ್ಲಿರುವಾಗ ಕಾಲಹರಣ ಮಾಡದೆ, ವಿಳಂಬ ಧೋರಣೆ ಅನುಸರಿಸದೆ ಸರ್ಕಾರ ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ನಡೆಸಿ ಸಂತ್ರಸ್ತರ ಬೆನ್ನಿಗೆ ನಿಲ್ಲಬೇಕು ಎಂದು ಆರ್.ಅಶೋಕ ಸರ್ಕಾರದ ಕಿವಿ ಹಿಂಡಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular