ಪ್ರಪೋಸ್ ನಿರಾಕರಿಸಿದ ಬಿಎ ವಿದ್ಯಾರ್ಥಿನಿ ಮೇಲೆ ಸಹ ಪ್ರಾಧ್ಯಾಪಕನಿಂದ ಅತ್ಯಾಚಾರ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿರುವ ಅಲಹಾಬಾದ್ ವಿಶ್ವವಿದ್ಯಾಲಯದ ಪುರಾತನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರೊಬ್ಬರ ವಿರುದ್ದ ಭಾನುವಾರ ಬಿಎ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಆರೋಪಿಯನ್ನು ಅಜಯ್ ಸಾಗರ್ ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಕರ್ನಲ್ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಲ್‌ ಗಂಜ್ ಎಸಿಪಿ ರಾಜೀವ್ ಕುಮಾರ್ ಯಾದವ್ ಪ್ರಕಾರ, ಬಿಎ ಮೂರನೇ ವರ್ಷದ ವಿದ್ಯಾರ್ಥಿನಿಗೆ ಸಾಗರ್ ಪ್ರಪೋಸ್ ಮಾಡಿದ್ದಾನೆ. ಅದನ್ನು ಅವಳು ತಿರಸ್ಕರಿಸಿದ್ದಳು. ಇದಾವುದನ್ನೂ ಲೆಕ್ಕಿಸದೆ ಆಕೆಗೆ ಕರೆ ಮಾಡಿ ಸಂದೇಶ ಕಳುಹಿಸುತ್ತಿದ್ದರು ಎಂದು ಆರೋಪಿಸಿದ್ದಾಳೆ.

ಜನವರಿ 15 ರಂದು ಸಹಾಯಕ ಪ್ರಾಧ್ಯಾಪಕರು ಅವಳನ್ನು ಮಮ್‌ ಫೋರ್ಡ್‌ ಗಂಜ್‌ನ ಉದ್ಯಾನವನಕ್ಕೆ ಕರೆದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ನಂತರ ಸಾಗರ್ ಆಕೆಯನ್ನು ತನ್ನ ಕೋಣೆಗೆ ಕರೆದೊಯ್ದು ಬಲವಂತವಾಗಿ ದೈಹಿಕ ಸಂಬಂಧ ಬೆಳೆಸಿದ್ದ. ಅಲ್ಲದೆ ಈ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದು ವಿದ್ಯಾರ್ಥಿನಿ ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅಜಯ್ ಸಾಗರ್ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಎಸಿಪಿ ಯಾದವ್ ಅವರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read