ಲಖನೌ: ಉತ್ತರ ಪ್ರದೇಶ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿರುವ ಘಟನೆ ನಡೆದಿದೆ.
ಲಖನೌದ ಚೌದರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಸಿಎಂ ಕೇಶವ್ ಪ್ರಸಾದ್ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಕೇಶವ್ ಪ್ರಸಾದ್ ಅವರು ಲಖನೌದಿಂದ ಕೌಶಂಬಿಗೆ ಪ್ರಯಾಣಿಸುತ್ತಿದ್ದರು.
ಈ ವೇಳೆ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ತಕ್ಷಣ ಎಚ್ಚೆತ್ತ ಪೈಲಟ್, ಹೆಲಿಕಾಪ್ಟರ್ ನ್ನು ಮತ್ತೆ ಲಖನೌ ಏರ್ ಪೋರ್ಟ್ ತಿರುಗಿಸಿದ್ದು, ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ.
ಹೆಲಿಕಾಪ್ಟರ್ ನ ಒಳಭಾಗದಲ್ಲಿ ಏಕಾಏಕಿ ಹೊಗೆ ಕಂಡುಬಂದ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ತಿಳಿದುಬಂದಿದೆ. ಡಿಸಿಎಂ ಕೇಶ್ವರ್ ಪ್ರಸಾದ್ ಹಾಗೂ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

