Shocking Video | ಕುಡಿದ ಮತ್ತಿನಲ್ಲಿ ಪತ್ನಿಗೆ ಕಿರುಕುಳ: ಪೊಲೀಸ್ ಅಧಿಕಾರಿಯಿಂದ ಸಾರ್ವಜನಿಕರ ಸಮ್ಮುಖದಲ್ಲೇ ಅಸಭ್ಯ ವರ್ತನೆ

ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಕುಡಿದ ಮತ್ತಿನಲ್ಲಿ ಪೊಲೀಸ್ ಅಧಿಕಾರಿಯೊಬ್ಬ ತನ್ನ ಹೆಂಡತಿಯನ್ನು ಸಾರ್ವಜನಿಕವಾಗಿ ಕಿರುಕುಳಪಡಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ವಿಡಿಯೋದಲ್ಲಿ, ಪೋಲಿಸ್ ಸಮವಸ್ತ್ರ ಧರಿಸಿರುವ ಸಬ್‌ಇನ್‌ಸ್ಪೆಕ್ಟರ್ ಒಬ್ಬ, ಬಸ್ ನಿಲ್ದಾಣದಲ್ಲಿ ತನ್ನ ಪತ್ನಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದು ಕಂಡುಬಂದಿದೆ. ಆತ ಹೆಂಡತಿಯನ್ನು ಅನುಮತಿಯಿಲ್ಲದೆ ಸ್ಪರ್ಶಿಸಿ, ತನ್ನ ಕಡೆಗೆ ಎಳೆಯಲು ಪ್ರಯತ್ನಿಸುತ್ತಿದ್ದಾನೆ. ಇದರಿಂದ ಮಹಿಳೆ ತೀವ್ರ ಮುಜುಗರಕ್ಕೊಳಗಾಗಿದ್ದಾರೆ ಮತ್ತು ಆತಂಕಗೊಂಡಿದ್ದಾರೆ.

ಈ ಘಟನೆ ಸಾರ್ವಜನಿಕ ಸ್ಥಳದಲ್ಲಿ ನಡೆದಿದ್ದು, ಸಾರ್ವಜನಿಕರು ಇದನ್ನು ವಿಡಿಯೋ ಮಾಡಿದ್ದಾರೆ. ವಿಡಿಯೋದಲ್ಲಿ ಪೋಲಿಸ್ ಅಧಿಕಾರಿ ಕ್ಯಾಮೆರಾವನ್ನು ನೋಡಿದರೂ ತನ್ನ ವರ್ತನೆಯನ್ನು ನಿಲ್ಲಿಸಿಲ್ಲ.

ಈ ವಿಡಿಯೋ ವೈರಲ್ ಆದ ನಂತರ, ಕಾಸ್‌ಗಂಜ್ ಪೊಲೀಸ್ ಇಲಾಖೆ ಬುಧವಾರ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಸಬ್‌ಇನ್‌ಸ್ಪೆಕ್ಟರ್‌ನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ತಿಳಿಸಿದೆ. ಹೆಚ್ಚಿನ ತನಿಖೆ ಮತ್ತು ಕ್ರಮ ಬಾಕಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಡಿಯೋ ನೋಡಿದ ನೆಟಿಜನ್‌ಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಅವನನ್ನು ಪೋಲಿಸ್ ಇಲಾಖೆಯಿಂದಲೇ ವಜಾ ಮಾಡಬೇಕು” ಎಂದು ಕೆಲವರು ಆಗ್ರಹಿಸಿದ್ದಾರೆ.

ಪೊಲೀಸ್ ಅಧಿಕಾರಿಯೇ ಸಾರ್ವಜನಿಕವಾಗಿ ಇಂತಹ ಕೃತ್ಯ ಎಸಗಲು ಹೆದರದಿದ್ದರೆ, ಅಪರಾಧಿಗಳು ಏನು ಮಾಡಬಹುದು ಎಂದು ಅನೇಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಗೆ ಕಳಂಕ ತಂದಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read