ನಾಯಿ ಕಚ್ಚಿದ ತಿಂಗಳ ನಂತರ ಅಸಹಜ ವರ್ತನೆ, ರೇಬೀಸ್ ನಿಂದ ಬಾಲಕ ಸಾವು

ಗಾಜಿಯಾಬಾದ್: ಒಂದು ತಿಂಗಳ ಹಿಂದೆ ನಾಯಿ ಕಚ್ಚಿದ ಘಟನೆಯನ್ನು ಪೋಷಕರಿಗೆ ತಿಳಿಸದೇ ಮುಚ್ಚಿಟ್ಟಿದ್ದ 14 ವರ್ಷದ ಬಾಲಕ ರೇಬಿಸ್‌ನಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

8 ನೇ ತರಗತಿಯ ವಿದ್ಯಾರ್ಥಿ ಶಹವಾಜ್ ಸೋಮವಾರ ಸಂಜೆ ಬುಲಂದ್‌ ಶಹರ್‌ ನಿಂದ ಗಾಜಿಯಾಬಾದ್‌ಗೆ ಮರಳಿ ಕರೆತರುತ್ತಿದ್ದಾಗ ಮೃತಪಟ್ಟಿದ್ದಾನೆ, ಬಾಲಕ ಆರೋಗ್ಯ ಸ್ಥಿತಿ ಹದಗೆಟ್ಟ ನಂತರ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು.

ವಿಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚರಣ್ ಸಿಂಗ್ ಕಾಲೋನಿ ನಿವಾಸಿ ಶಹವಾಜ್ ಎಂಬಾತನಿಗೆ ಒಂದೂವರೆ ತಿಂಗಳ ಹಿಂದೆ ನೆರೆಮನೆಯ ನಾಯಿ ಕಚ್ಚಿದ್ದರೂ ಭಯದಿಂದ ಪೋಷಕರಿಗೆ ಅದನ್ನು ಮುಚ್ಚಿಟ್ಟಿದ್ದ. ಬಾಲಕ ರೇಬೀಸ್‌ಗೆ ತುತ್ತಾಗಿ ಅಸಹಜವಾಗಿ ವರ್ತಿಸಲು ಪ್ರಾರಂಭಿಸಿದ. ಸೆಪ್ಟೆಂಬರ್ 1 ರಂದು ತಿನ್ನುವುದನ್ನು ನಿಲ್ಲಿಸಿದ. ಈ ಬಗ್ಗೆ ಕೇಳಿದಾಗ ತಮ್ಮ ನೆರೆಹೊರೆಯವರ ನಾಯಿ ಕಚ್ಚಿದೆ ಎಂದು ತಮ್ಮ ಕುಟುಂಬ ಸದಸ್ಯರಿಗೆ ತಿಳಿಸಿದ್ದಾನೆ.

ಕುಟುಂಬದವರು ಶಹವಾಜ್ ನನ್ನು ದೆಹಲಿಯ ಸರ್ಕಾರಿ ಆಸ್ಪತ್ರೆಗಳಿಗೆ ಕರೆದೊಯ್ದರು. ಆದರೆ, ಅಲ್ಲಿ ಚಿಕಿತ್ಸೆಗಾಗಿ ದಾಖಲಿಸಲಿಲ್ಲ. ಕೊನೆಗೆ ಬುಲಂದ್‌ ಶಹರ್‌ ನಲ್ಲಿರುವ ಆಯುರ್ವೇದ ವೈದ್ಯರ ಬಳಿ ಚಿಕಿತ್ಸೆಗಾಗಿ ಕರೆದುಕೊಂಡು ಹೋದರು ಎಂದು ಮನೆಯವರು ಪೊಲೀಸರಿಗೆ ತಿಳಿಸಿದ್ದಾರೆ.

ಆಂಬ್ಯುಲೆನ್ಸ್‌ನಲ್ಲಿ ಗಾಜಿಯಾಬಾದ್‌ ಗೆ ವಾಪಸ್ ಕರೆತರುವಾಗ ಬಾಲಕ ಮೃತಪಟ್ಟಿದ್ದಾನೆ. ಈ ಸಂಬಂಧ ದೂರು ದಾಖಲಾಗಿದ್ದು, ನಾಯಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕೊತ್ವಾಲಿ ವಲಯದ ಸಹಾಯಕ ಪೊಲೀಸ್ ಆಯುಕ್ತ ನಿಮಿಷ್ ಪಾಟೀಲ್ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read