UP horror: ಹುಟ್ಟುಹಬ್ಬದ ಪಾರ್ಟಿಯಲ್ಲಿ ನೃತ್ಯ ಮಾಡಲು ಬಂದಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್

ಹುಟ್ಟುಹಬ್ಬದ ಪಾರ್ಟಿಯಲ್ಲಿ ನೃತ್ಯ ಮಾಡಲು ಬಂದಿದ್ದ ಯುವತಿಯನ್ನು ಆರು ಮಂದಿಯಿದ್ದ ಗುಂಪು ಕಾರಿನಲ್ಲಿ ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ.

ಉನ್ನಾವೋ ಪ್ರಾಂತ್ಯದ ಪ್ರಾಪರ್ಟಿ ಡೀಲರ್ ಒಬ್ಬರ ಹುಟ್ಟುಹಬ್ಬವನ್ನು ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ನೃತ್ಯ ಮಾಡಲು ಮೂವರು ಯುವತಿಯರನ್ನು ಕರೆಯಿಸಲಾಗಿತ್ತು. ಈ ವೇಳೆ ಪಾರ್ಟಿಯಲ್ಲಿದ್ದವರು ಸಂಪೂರ್ಣವಾಗಿ ಪಾನಮತ್ತರಾಗಿದ್ದರು ಎನ್ನಲಾಗಿದೆ.

ಬಳಿಕ ಮೂವರು ಯುವತಿಯರ ಪೈಕಿ ಒಬ್ಬರನ್ನು ಕಾರಿನಲ್ಲಿ ಅಪಹರಿಸಿದ 6 ಮಂದಿಯ ಗುಂಪು ಸಮೀಪದ ಅರಣ್ಯ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದೆ. ಸಂತ್ರಸ್ತೆ ಮೊದಲಿಗೆ ಜಾಜ್ಮು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಬಳಿಕ ಉನ್ನಾವೋ ಸದರ್ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದೀಗ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಆರು ಮಂದಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read