HomeIndiaತಂದೆಯನ್ನ ಕೊಂದು ಸೂಟ್ ಕೇಸ್ ನಲ್ಲಿ ತುಂಬಿದ ಪಾಪಿ ಪುತ್ರ

ತಂದೆಯನ್ನ ಕೊಂದು ಸೂಟ್ ಕೇಸ್ ನಲ್ಲಿ ತುಂಬಿದ ಪಾಪಿ ಪುತ್ರ

ಉತ್ತರ ಪ್ರದೇಶದ ಆಘಾತಕಾರಿ ಘಟನೆಯಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ವೃದ್ಧ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದಿದ್ದಾನೆ.

ಪೊಲೀಸರ ಪ್ರಕಾರ ಕೊಲೆಯ ನಂತರ 30ವರ್ಷದ ಆರೋಪಿ 63 ವರ್ಷದ ತಂದೆಯ ಮೃತದೇಹವನ್ನು ಸೂಟ್‌ಕೇಸ್‌ ನೊಳಗಿಡಲು ತುಂಡುಗಳನ್ನಾಗಿ ಕತ್ತರಿಸಿ ಗೋರಖ್‌ಪುರದಲ್ಲಿ ವಿಲೇವಾರಿ ಮಾಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಯನ್ನು ಸಂತೋಷ್ ಕುಮಾರ್ ಗುಪ್ತಾ ಅಲಿಯಾಸ್ ಪ್ರಿನ್ಸ್ ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಮುರಳಿಧರ್ ಗುಪ್ತಾ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ ತಿವಾರಿಪುರ ವ್ಯಾಪ್ತಿಯ ಸೂರಜ್ ಕುಂಡ್ ಕಾಲೋನಿಯಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.

ಆರೋಪಿಯ ಸಹೋದರ ಪ್ರಶಾಂತ್ ಗುಪ್ತಾ ಪೊಲೀಸರಿಗೆ ದೂರು ನೀಡಿದ ನಂತರ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿದ್ದಾರೆ. ಕುಟುಂಬದಲ್ಲಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಮನೆಯಲ್ಲಿ ತಂದೆಯೊಬ್ಬರೇ ಇರುವುದನ್ನು ಕಂಡು ಆರೋಪಿ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ. ವೃದ್ದರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಸಹೋದರನ ಕೊಠಡಿಯಿಂದ ಸೂಟ್‌ಕೇಸ್ ತಂದು ಶವದ ತುಂಡುಗಳನ್ನು ಸೂಟ್‌ಕೇಸ್‌ನಲ್ಲಿ ಇರಿಸಿ ಮನೆಯ ಹಿಂದಿನ ಬೀದಿಯಲ್ಲಿ ಬಚ್ಚಿಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ಸಹೋದರನ ಮಾಹಿತಿಯ ಮೇರೆಗೆ ಪೊಲೀಸರು ಮೃತದೇಹದ ಭಾಗಗಳನ್ನು ವಶಪಡಿಸಿಕೊಂಡು ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.. ಹೆಚ್ಚಿನ ತನಿಖೆ ಆರಂಭವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular