
ಪೊಲೀಸರ ಪ್ರಕಾರ ದಸ್ತೋಯ್ ಗ್ರಾಮದ ಆರೋಪಿ ಸೋನು ಪ್ರಜಾಪತಿ ಡೈರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಆತ ಫೂಲ್‌ಗರ್ಹಿಯಲ್ಲಿರುವ ನೀತು ಪ್ರಜಾಪತಿ ಮನೆಗೆ ನುಗ್ಗಿ ಆಕೆಯ ತಲೆಗೆ ಗುಂಡು ಹಾರಿಸಿದ್ದಾನೆ. ಈ ವೇಳೆ ಸಂತ್ರಸ್ತೆಯ ಕುಟುಂಬವು ಅವನನ್ನು ಹಿಡಿಯಲು ಪ್ರಯತ್ನಿಸಿತು. ಆದರೆ ಅವನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದನು. ನಂತರ ಅವನು ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

