ಹಾಡಹಗಲೇ ಗುಂಡಿಕ್ಕಿ ಶಾಲಾ ಪ್ರಾಂಶುಪಾಲನ ಹತ್ಯೆ; ಶಾಕಿಂಗ್‌ ದೃಶ್ಯ CC TV ಯಲ್ಲಿ ಸೆರೆ

ಉತ್ತರ ಪ್ರದೇಶದ ಮೊರಾದಾಬಾದ್‌ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಶಾಲಾ ಪ್ರಾಂಶುಪಾಲರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಪ್ರಾಂಶುಪಾಲ ಶಬಾಬ್-ಉಲ್-ಹಸನ್ ಸಾಯಿ ವಿದ್ಯಾ ಮಂದಿರ ಶಾಲೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಮೋಟಾರು ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿದ್ದಾರೆ.

ದಾಳಿಕೋರರಲ್ಲಿ ಒಬ್ಬ ಅವರ ತಲೆಗೆ ಗುಂಡು ಹಾರಿಸಿದ್ದು, ಇದರಿಂದಾಗಿ ನೆಲದ ಮೇಲೆ ಮುಖಾಮುಖಿಯಾಗಿ ಬಿದ್ದಿದ್ದಾರೆ. ಅಕ್ಕಪಕ್ಕದ ನಿವಾಸಿಗಳು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದರು ಎಂದು ವೈದ್ಯರು ಘೋಷಿಸಿದರು.

ಮಜೋಲಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಲಕ್ಡಿ ಪ್ರದೇಶದಲ್ಲಿ ಬೆಳಿಗ್ಗೆ 9:00 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗುಂಡಿನ ದಾಳಿ ನಡೆಸಿದ ತಕ್ಷಣ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ. ಒಬ್ಬ ಶೂಟರ್‌ನ ಮುಖವನ್ನು ಸಿಸಿಟಿವಿ ಫೂಟೇಜ್ ಬಹಿರಂಗಪಡಿಸಿದರೆ, ಇನ್ನೊಬ್ಬ ಶೂಟರ್ ಹೆಲ್ಮೆಟ್ ಧರಿಸಿದ್ದಾನೆ.

ಹತ್ಯೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ ಎಂದು ಎಸ್ಪಿ ಸಿಟಿ ರಣವಿಜಯ್ ಸಿಂಗ್ ಹೇಳಿದ್ದಾರೆ. ಆದರೆ, ನಾಲ್ಕು ತಿಂಗಳ ಹಿಂದೆ ಇದೇ ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಶಬಾಬ್ ಉಲ್ ಹಸನ್ ಭಾಗಿಯಾಗಿದ್ದ. ವಿದ್ಯಾರ್ಥಿಗೆ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಿ ಮೃತ ವಿದ್ಯಾರ್ಥಿಯ ಕುಟುಂಬ ಹಸನ್ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು. ಈ ಪ್ರಕರಣಕ್ಕೂ ಕೊಲೆಗೂ ಸಂಬಂಧವಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read