SHOCKING: ಖಾಸಗಿ ಆಸ್ಪತ್ರೆಯಲ್ಲಿ ಬೆತ್ತಲೆ ಮಹಿಳೆಗೆ ವಾರ್ಡ್ ಬಾಯ್ ಶಸ್ತ್ರಚಿಕಿತ್ಸೆ

ಬಸ್ತಿ: ಉತ್ತರ ಪ್ರದೇಶದ ಬಸ್ತಿಯಲ್ಲಿ ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್ ಮಹಿಳೆಯೊಬ್ಬರಿಗೆ ವಿವಸ್ತ್ರಗೊಳಿಸಿ ಶಸ್ತ್ರಚಿಕಿತ್ಸೆ ನಡೆಸಿದ್ದಾನೆ. ವಿಡಿಯೋ ರೆಕಾರ್ಡ್ ಮಾಡಿದ ವಾರ್ಡ್ ಬಾಯ್ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದು, ಇದನ್ನು ಅನೇಕರು ನೋಡಿದ್ದಾರೆ.

ಇದು ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಗ್ಯ ಇಲಾಖೆ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ವಾರ್ಡ್ ಬಾಯ್ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರಿಗೆ ಸಹಾಯ ಮಾಡುತ್ತಿದ್ದು, ಮಹಿಳೆ ಆಪರೇಷನ್ ಥಿಯೇಟರ್‌ನಲ್ಲಿ ಬೆತ್ತಲೆಯಾಗಿ ಮಲಗಿರುವುದು ಕಂಡುಬಂದಿದೆ. ವಾರ್ಡ್ ಬಾಯ್ ತನ್ನ ಕಾರ್ಯದ ವೀಡಿಯೊ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾನೆ. ವೀಡಿಯೋ ನೋಡಿದ ಜನರು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ವಾರ್ಡ್ ಬಾಯ್‌ನ ನಾಚಿಕೆಗೇಡಿನ ಕೃತ್ಯಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಹಾರ್ದಿಯಾ ಮೂಲದ ಬಸ್ತಿ ಕೇರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕಣ್ಣಿನ ಕೇಂದ್ರದಲ್ಲಿ ಈ ಘಟನೆ ಸಂಭವಿಸಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಬಸ್ತಿ ಕೇರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ನೇತ್ರ ಕೇಂದ್ರದ ನಿರ್ದೇಶಕ ಡಾ. ಸಂಜಯ್ ಕುಮಾರ್ ಅವರ ಸೂಚನೆ ಮೇರೆಗೆ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿರುವುದಾಗಿ ವಾರ್ಡ್ ಬಾಯ್ ಹೇಳಿದ್ದಾನೆ. ಆಸ್ಪತ್ರೆ ಆಡಳಿತ ಮಂಡಳಿ ತನಿಖೆ ಕೈಗೊಂಡಿದ್ದು, ವಾರ್ಡ್ ಬಾಯ್ ಕೃತ್ಯಕ್ಕಾಗಿ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.

ಈ ಬಗ್ಗೆ ತನಿಖೆ ನಡೆಸಲು ತಂಡ ರಚಿಸಿದ್ದು, ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ. ಈ ಸಂಬಂಧ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

https://twitter.com/Izaankh55573896/status/1823832019408969818

https://twitter.com/LAVKUSH05186541/status/1823970133821604118

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read