HomeLatest NewsSHOCKING: ಜಾತ್ರೆಯಲ್ಲಿ ಆಕ್ಸೆಲ್ ಕಟ್ ಆಗಿ ಮುರಿದು ಬಿದ್ದ ಉಯ್ಯಾಲೆ: ಬಾಲಕಿ ಸಾವು, 5 ಮಂದಿಗೆ...

SHOCKING: ಜಾತ್ರೆಯಲ್ಲಿ ಆಕ್ಸೆಲ್ ಕಟ್ ಆಗಿ ಮುರಿದು ಬಿದ್ದ ಉಯ್ಯಾಲೆ: ಬಾಲಕಿ ಸಾವು, 5 ಮಂದಿಗೆ ಗಾಯ

ಬುಲಂದ್‌ಶಹರ್(ಉತ್ತರ ಪ್ರದೇಶ): ಬುಧವಾರ ಸಂಜೆ ಕಾರ್ತಿಕ ಪೂರ್ಣಿಮಾ ಜಾತ್ರೆಯಲ್ಲಿ ಉಯ್ಯಾಲೆಯೊಂದು ಹಠಾತ್ತನೆ ಕೆಳಗೆ ಬಿದ್ದು ಆರು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇತರ ಐದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದರು.

ಸಂಜೆ 6 ಗಂಟೆ ಸುಮಾರಿಗೆ ರಾಮ್‌ಘಾಟ್ ಗ್ರಾಮದಲ್ಲಿ ಆಕ್ಸಲ್ ಬೇರಿಂಗ್ ಮುರಿದ ಕಾರಣ ಸಣ್ಣ ಉಯ್ಯಾಲೆಯೊಂದು ಕೆಳಗೆ ಬಿದ್ದಿತು ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ತೇಜ್‌ವೀರ್ ಸಿಂಗ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹತ್ತಿರದಲ್ಲಿ ನಿಂತಿದ್ದ ಹಿಮಾಂಶಿ (6) ಎಂಬ ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಸ್ವಿಂಗ್‌ನಲ್ಲಿದ್ದ ಇತರ ಐದು ಮಂದಿ ಕೂಡ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಹಿಮಾಂಶಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಸಿಂಗ್ ಹೇಳಿದರು. ಇತರ ಐದು ಗಾಯಾಳುಗಳನ್ನು ಪ್ರಥಮ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ಸಂಬಂಧಿತ ವಿಭಾಗಗಳ ಅಡಿಯಲ್ಲಿ ರಾಮಘಾಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular