HomeUncategorizedಹೃದಯ ವಿದ್ರಾವಕ ಘಟನೆ: ಮೊಬೈಲ್‌ ಕಾರಣಕ್ಕೆ ಬಾಲಕಿಯ ಅಂತ್ಯ...!

ಹೃದಯ ವಿದ್ರಾವಕ ಘಟನೆ: ಮೊಬೈಲ್‌ ಕಾರಣಕ್ಕೆ ಬಾಲಕಿಯ ಅಂತ್ಯ…!

ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, 17 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ಅತಿಯಾಗಿ ಮೊಬೈಲ್ ಫೋನ್ ಬಳಸುತ್ತಿದ್ದ ಕಾರಣಕ್ಕೆ ತಾಯಿ ಗದರಿಸಿದ್ದರಿಂದ ಮನನೊಂದು ಈ ಕೃತ್ಯ ಎಸಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಕಂದರ್‌ಪುರ ಪ್ರದೇಶದ ಬಸ್ತಿ ಬುಜುರ್ಗ್ ಗ್ರಾಮದ ಪಚುವಾರ ಮಥಿಯಾ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬಾಲಕಿಯು ನಿರಂತರವಾಗಿ ಮೊಬೈಲ್ ಫೋನ್ ಬಳಸುತ್ತಿದ್ದ ಕಾರಣಕ್ಕೆ ತಾಯಿ ಗದರಿದ ನಂತರ ಬೇಸರಗೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಗದರಿಕೆಯ ನಂತರ, ಯುವತಿ ಕಾಲುವೆಯ ಬಳಿ ಹೋಗಿ ವಿಷ ಸೇವಿಸಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಯಮಿತ ಗಸ್ತು ತಿರುಗುತ್ತಿದ್ದ ಪೊಲೀಸ್ ತಂಡವು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಾಲಕಿಯನ್ನು ಪತ್ತೆ ಮಾಡಿದೆ. ತಕ್ಷಣವೇ ಆಕೆಯನ್ನು ಸಿಕಂದರ್‌ಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ (ಸಿಎಚ್‌ಸಿ) ಸಾಗಿಸಲಾಯಿತು. ಆದರೆ, ವೈದ್ಯರು ಆಕೆಯನ್ನು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದರು. ಅಲ್ಲಿನ ವೈದ್ಯರ ಪ್ರಯತ್ನದ ಹೊರತಾಗಿಯೂ, ಬಾಲಕಿ ಬದುಕಿ ಉಳಿಯಲಿಲ್ಲ. ಚಿಕಿತ್ಸೆ ಪಡೆಯುತ್ತಿದ್ದಾಗಲೇ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸ್ ತಂಡ ತಿಳಿಸಿದೆ.

ಈ ಸಂಬಂಧ ಕಾನೂನಿನ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯ ಪ್ರಕರಣವೆಂದು ಕಂಡುಬಂದರೂ, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular