HomeAutoಇಯರ್‌ಫೋನ್ ಹಾಕಿಕೊಂಡು ಸ್ಕೂಟರ್ ಚಲಾಯಿಸುತ್ತಿದ್ದ ವೇಳೆಯಲ್ಲೇ ಮೊಬೈಲ್ ಸ್ಫೋಟ: ಯುವತಿ ಸಾವು

ಇಯರ್‌ಫೋನ್ ಹಾಕಿಕೊಂಡು ಸ್ಕೂಟರ್ ಚಲಾಯಿಸುತ್ತಿದ್ದ ವೇಳೆಯಲ್ಲೇ ಮೊಬೈಲ್ ಸ್ಫೋಟ: ಯುವತಿ ಸಾವು

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೇಳೆ ಮಹಿಳೆಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಹಿಳೆಯ ಜೇಬಿನಲ್ಲಿದ್ದ ಮೊಬೈಲ್ ಫೋನ್ ಸ್ಫೋಟಗೊಂಡಿದ್ದರಿಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಮಹಿಳೆಯ ತಲೆಯ ಮೇಲೆ ಬೈಕ್ ಬಿದ್ದಿದೆ. ಅಪಘಾತದ ವೇಳೆ ಮಹಿಳೆ ಹೆಲ್ಮೆಟ್ ಧರಿಸಿರಲಿಲ್ಲ.

ಮಹಿಳೆ ನೆಲಕ್ಕುರುಳುತ್ತಿದ್ದಂತೆ ಸ್ಥಳದ ಸುತ್ತ ದೊಡ್ಡ ಜನ ಜಮಾಯಿಸಿದರು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಗಾಯಾಳು ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಮೊಬೈಲ್ ಫೋನ್ ಸ್ಫೋಟಗೊಂಡ ನಂತರ ಅಪಘಾತದಲ್ಲಿ ಉಂಟಾದ ಗಾಯಗಳಿಂದ ಮಹಿಳೆ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಬರುವಷ್ಟರಲ್ಲಿ ಮಹಿಳೆ ಮೃತಪಟ್ಟಿದ್ದಾಳೆ ಎಂದು ಆಸ್ಪತ್ರೆ ಅಧಿಕಾರಿಗಳು ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬುಧವಾರ (ಏಪ್ರಿಲ್ 24) ಬೆಳಗ್ಗೆ 10 ಗಂಟೆಗೆ ಮಹಿಳೆ ತನ್ನ ಸ್ಕೂಟರ್‌ನಲ್ಲಿ ಕಾನ್ಪುರ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೃತ ಮಹಿಳೆಯನ್ನು ಫರೂಕಾಬಾದ್ ಜಿಲ್ಲೆಯ ನೆಹ್ರಾರಿಯಾ ಗ್ರಾಮದ ನಿವಾಸಿ ಪೂಜಾ(28) ಎಂದು ಗುರುತಿಸಲಾಗಿದೆ. ಕಾನ್ಪುರ ರೈಲು ನಿಲ್ದಾಣದಿಂದ ಮುಂಬೈಗೆ ರೈಲು ಹಿಡಿಯಲು ಮಹಿಳೆ ತೆರಳುತ್ತಿದ್ದಳು. ಆದರೆ, ಆಕೆಗೆ ನಿಲ್ದಾಣಕ್ಕೆ ಹೋಗಲು ಸಾಧ್ಯವಾಗಲಿಲ್ಲ.

ಚೌಬೆಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮನ್ಪುರ್ ಗ್ರಾಮದ ಬಳಿ ಕಾನ್ಪುರ-ಅಲಿಘರ್ ಹೆದ್ದಾರಿಯಲ್ಲಿರುವ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ಈ ದುರಂತ ಘಟನೆ ಸಂಭವಿಸಿದೆ. ಮಹಿಳೆ ಹೆಲ್ಮೆಟ್ ಧರಿಸಿರಲಿಲ್ಲ ಮತ್ತು ಆಕೆಯ ಕಿವಿಯಲ್ಲಿ ಇಯರ್ ಫೋನ್ ಇತ್ತು. ಅತಿವೇಗವಾಗಿ ಸ್ಕೂಟರ್ ಓಡಿಸುತ್ತಿದ್ದಳು, ವಿಭಜಕಕ್ಕೆ ಡಿಕ್ಕಿ ಹೊಡೆದ ನಂತರ ತಲೆಗೆ ದೊಡ್ಡ ಗಾಯಗಳಾಗಿ ಮೃತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular