BREAKING : ‘ಪಶ್ಚಿಮ ಬಂಗಾಳ’ ರೈಲು ಅಪಘಾತಕ್ಕೆ ‘ಮಾನವ ಲೋಪ’ ಕಾರಣ : ರೈಲ್ವೇ ಅಧಿಕಾರಿಗಳ ಸ್ಪಷ್ಟನೆ

ಕಾಂಚನಜುಂಗಾ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ನಡುವೆ ಡಿಕ್ಕಿ ಸಂಭವಿಸಿದ್ದು, ಮಾನವ ದೋಷದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ರೈಲ್ವೆಯ ಉನ್ನತ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಗೂಡ್ಸ್ ರೈಲಿನ ಲೋಕೋ ಪೈಲಟ್ ಸಿಗ್ನಲ್ ಅನ್ನು ನಿರ್ಲಕ್ಷಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಕಾಂಚನಜುಂಗಾ ಎಕ್ಸ್ಪ್ರೆಸ್ ಅಗರ್ತಲಾದಿಂದ ಸೀಲ್ಡಾಗೆ ಪ್ರಯಾಣಿಸುತ್ತಿತ್ತು. ಸಿಗ್ನಲ್ ಅನ್ನು ನಿರ್ಲಕ್ಷಿಸಿದ ಗೂಡ್ಸ್ ರೈಲು ರೈಲಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಸಿಇಒ ಜಯವರ್ಮ ಸಿನ್ಹಾ ತಿಳಿಸಿದ್ದಾರೆ.ಅಪಘಾತದಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿದೆ.

ಸೀಲ್ಡಾಗೆ ತೆರಳುತ್ತಿದ್ದ ರೈಲಿಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಗೂಡ್ಸ್ ರೈಲಿನ ಚಾಲಕ ಮತ್ತು ಎಕ್ಸ್ ಪ್ರೆಸ್ ರೈಲಿನ ಗಾರ್ಡ್ ಸಹ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸಿನ್ಹಾ ಹೇಳಿದರು.

https://twitter.com/ANI/status/1802649467176505737

https://twitter.com/ANI/status/1802651351245365613

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read