HomeLatest NewsBIG NEWS: ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

BIG NEWS: ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೆಂಗಳೂರು: ನಟ ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಪೇಂದ್ರ ಅವರಿಗೆ ಹೈಪರ್ ಎಸಿಡಿಟಿಯಿಂದಾಗಿ ಆರೋಗ್ಯ ಸಮಸ್ಯೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಸದ್ಯ ಗುಣಮುಖರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಗೆ ತೆರಳಿದ್ದಾರೆ.

ಉಪೇಂದ್ರ ಅವರಿಗೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಆರೋಗ್ಯ ಸಮಸ್ಯೆಯಾಗಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ. ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular