BIG NEWS : ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಣ : ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು :  ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಣ ಮಾಡುವ ಕುರಿತು  ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಕ್ರಮಾಂಕ (1)ರಲ್ಲಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಇವರು 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-110ರಲ್ಲಿ ಘೋಷಿಸಿರುವಂತೆ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.

ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿ, ಉನ್ನತೀಕರಿಸಲು ಅರ್ಹವಿರುವ ಶಾಲೆಗಳ ಬಗ್ಗೆ ವರದಿ ಪಡೆದು ಉನ್ನತೀಕರಿಸಲು ಉದ್ದೇಶಿಸಿರುವ ಶಾಲೆಗಳಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಷ್ಟು ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಬೇಕೆಂಬ ಬಗ್ಗೆ ಸೂಕ್ತ ನಿರ್ಣಯ ಕೈಗೊಂಡು ಅರ್ಹ ಶಾಲೆಗಳ ಪಟ್ಟಿಯನ್ನು ತಯಾರಿಸಿ (KPS ಶಾಲೆಗಳ ಪಟ್ಟಿಯಲ್ಲಿರುವ ಶಾಲೆಗಳನ್ನು ಹೊರತುಪಡಿಸಿ) ಸಲ್ಲಿಸುವಂತೆ ಹಾಗೂ ಮೂಲಭೂತ ಸೌಲಭ್ಯಗಳ ವಿವರ, 8 ನೇ ತರಗತಿಯಲ್ಲಿ ವಿಧ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ವಿವರ, 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಉನ್ನತೀಕರಿಸುವ ಶಾಲೆಗಳಿಗೆ ಅವಶ್ಯವಿರುವ ಆವರ್ತಕ ಹಾಗೂ ಅನಾವರ್ತಕ ವೆಚ್ಚಗಳ ವಿವರ ಮತ್ತು ಪ್ರೌಢಶಾಲೆಗಳಾಗಿ ಮೇಲ್ದರ್ಜೆಗೇರಿಸಲು ಎಲ್ಲಾ ಮಾನದಂಡಗಳನ್ನು ಪೂರೈಸುವ ಶಾಲೆಗಳನ್ನು ಮಾತ್ರ ಪಟ್ಟಿ ಮಾಡಿ ಸಲ್ಲಿಸುವಂತೆ ಇಲಾಖೆಗೆ ತಿಳಿಸಲಾಗಿರುತ್ತದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಅನುಬಂಧ-1ರಲ್ಲಿ ನಮೂದಿಸಿರುವಂತೆ ಒಟ್ಟು 147 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಲು ಚಾಲ್ತಿಯಲ್ಲಿರುವ ಉನ್ನತೀಕರಣದ ನಿಯಮಗಳಿಗೊಳಪಟ್ಟು ಸರ್ಕಾರದ ಮಂಜೂರಾತಿ ನೀಡಿ ಆದೇಶಿಸಿದೆ.ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 430 ವೆಚ್ಚ-8/ 2025, ದಿನಾಂಕ: 06/06/2025 ಮತ್ತು 04/08/2025ರಲ್ಲಿ ನೀಡಿರುವ ಸಹಮತಿ ಮೇರೆಗೆ ಹೊರಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read