ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನಿಂದ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ. ಮೇಲ್ಮನವಿಯ ನಾಅಲ್ಕು ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಹೀಗಿದೆ:
ಪಶ್ಚಿಮ ಪದವಿಧರರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ, ಆಗ್ನೇಯ ಪದವಿಧರರ ಕ್ಷೇತ್ರಕ್ಕೆ ಶಶಿ ಹುಲಿಕುಂಟೆಮಠ, ಈಶಾನ್ಯ ಶಿಕ್ಷಕರ ಕ್ಷತ್ರಕ್ಕೆ ಶರಣಪ್ಪ ಮತ್ತೂರ್ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ ಕಣಕ್ಕಿಳಿಯಲಿದ್ದಾರೆ.

