HomeLatest NewsBREAKING: ನೇಣು ಹಾಕಿಕೊಂಡು UPSC ಆಕಾಂಕ್ಷಿ ಆತ್ಮಹತ್ಯೆ

BREAKING: ನೇಣು ಹಾಕಿಕೊಂಡು UPSC ಆಕಾಂಕ್ಷಿ ಆತ್ಮಹತ್ಯೆ

ನವದೆಹಲಿ: ದೆಹಲಿಯ ಓಲ್ಡ್ ರಾಜಿಂದರ್ ನಗರದಲ್ಲಿ 25 ವರ್ಷದ ಯುಪಿಎಸ್‌ಸಿ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮ್ಮುವಿನ ಮೂಲದ ತರುಣ್ ಠಾಕೂರ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಈತ ನಾಗರಿಕ ಸೇವೆಗಳ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ. ತರುಣ್ ಅವರ ಮೃತದೇಹ ಅವರ ಬಾಡಿಗೆ ವಸತಿಗೃಹದಲ್ಲಿ ಸೀಲಿಂಗ್ ಫ್ಯಾನ್‌ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳದಿಂದ ಕೈಬರಹದ ಟಿಪ್ಪಣಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿ ಅವರು ಸ್ವತಃ ಈ ನಿರ್ಧಾರ ತೆಗೆದುಕೊಳ್ಳುತ್ತಿರುವುದಾಗಿ ಮತ್ತು ಅವರ ನಿರ್ಧಾರಕ್ಕೆ ಯಾರನ್ನೂ ಹೊಣೆಗಾರರನ್ನಾಗಿ ಮಾಡಿಲ್ಲ ಎಂದು ಬರೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪದೇ ಪದೇ ಬಾಗಿಲು ತಟ್ಟಿದರೂ ತರುಣ್ ಪ್ರತಿಕ್ರಿಯಿಸದಿದ್ದಾಗ ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ತರುಣ್ ಅವರ ಕುಟುಂಬಕ್ಕೂ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಾಥಮಿಕ ತನಿಖೆಯಲ್ಲಿ ವಿದ್ಯಾರ್ಥಿಯು ಶೈಕ್ಷಣಿಕ ವಿಚಾರಕ್ಕೆ ಒತ್ತಡದಲ್ಲಿದ್ದನೆಂದು ಸೂಚಿಸುತ್ತದೆ. ಪೊಲೀಸತು ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular