HomeLatest Newsಗಮನಿಸಿ : UPSC, ಬ್ಯಾಂಕಿಂಗ್ ಉಚಿತ 'ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಗಮನಿಸಿ : UPSC, ಬ್ಯಾಂಕಿಂಗ್ ಉಚಿತ ‘ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಯುಪಿಎಸ್ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಹತೆ ಮತ್ತು ಸೂಚನೆಗಳು: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು. ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಅಥವಾ 3(ಬಿ) ಗೆ ಸೇರಿರಬೇಕು. ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ – ಪ್ರವರ್ಗ1, ಪ್ರವರ್ಗ 2(ಎ), 3(ಎ) ಮತ್ತು 3(ಬಿ) ಗಳಿಗೆ ರೂ.5.00 ಲಕ್ಷ. ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳು, ಪ್ರವರ್ಗ ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳು, ದಿನಾಂಕ ಮತ್ತು ಸಮಯವನ್ನು ನಂತರದ ದಿನಗಳಲ್ಲಿ ಇಲಾಖಾ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು.
ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in ಅನ್ನು ನೋಡಬಹುದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular