HomeKarnatakaUPSC ತರಬೇತಿಗೆ ಪ್ರವೇಶ ಪರೀಕ್ಷೆ ವೇಳಾಪಟ್ಟಿ, ಪಠ್ಯಕ್ರಮ ಪ್ರಕಟ

UPSC ತರಬೇತಿಗೆ ಪ್ರವೇಶ ಪರೀಕ್ಷೆ ವೇಳಾಪಟ್ಟಿ, ಪಠ್ಯಕ್ರಮ ಪ್ರಕಟ

ಬೆಂಗಳೂರು: ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024 -25 ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ(UPSC) ಪರೀಕ್ಷೆಗೆ ಸಿದ್ಧತೆಗೆ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಲು ನಡೆಸುವ ಪ್ರವೇಶ ಪರೀಕ್ಷೆಯ ವೇಳಾಪಟ್ಟಿ ಮತ್ತು ಪಠ್ಯಕ್ರಮವನ್ನು ಪ್ರಕಟಿಸಲಾಗಿದೆ.

2025ರ ಜನವರಿ 12ರಂದು ಸಾಮಾನ್ಯ ಅಧ್ಯಯನ ವಿಷಯಕ್ಕೆ ಮಧ್ಯಾಹ್ನ 2:30 ರಿಂದ ಸಂಜೆ 4 ಗಂಟೆಯವರೆಗೆ 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವತಿಯಿಂದ ಪರೀಕ್ಷೆ ನಡೆಸಲಾಗುವುದು.

ಬಹು ಆಯ್ಕೆ ಮತ್ತು ವಿಶ್ಲೇಷಣಾತ್ಮಕ ಪ್ರಶ್ನೆಗಳನ್ನು ಪರೀಕ್ಷೆಯಲ್ಲಿ ನೀಡಲಾಗುವುದು. ತಪ್ಪು ಉತ್ತರಗಳಿಗೆ ಋಣಾತ್ಮಕ ಮೌಲ್ಯಮಾಪನ ಇರುವುದಿಲ್ಲ. ಹೆಚ್ಚಿನ ವಿವರಗಳಿಗಾಗಿ http://cetonline.karnataka.gov.in/kea/ ವೆಬ್ಸೈಟ್ ಗಮನಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular