HomeIndiaವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಕೇಸ್: ಏರ್ ಇಂಡಿಯಾಗೆ ಶೋಕಾಸ್ ನೋಟಿಸ್

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಕೇಸ್: ಏರ್ ಇಂಡಿಯಾಗೆ ಶೋಕಾಸ್ ನೋಟಿಸ್

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಾನದ ಸಿಬ್ಬಂದಿ ಕರ್ತವ್ಯ ಲೋಪಕ್ಕೆ ಪ್ರಯಾಣಿಕರಿಗೆ ಶಿಕ್ಷೆ ಏಕೆ ಎಂದು ಡಿಜಿಸಿಎ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ವಿಮಾನದ ಪೈಲಟ್ ಗಳು, ಕ್ಯಾಬಿನ್ ಸಿಬ್ಬಂದಿ ಕರ್ತವ್ಯ ಲೋಪವಾಗಿದೆ. ಇವರ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ವಿಮಾನಯಾನ ಸಚಿವಾಲಯದ ನಿರ್ದೇಶಕರಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಹ ಪ್ರಯಾಣಿಕ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದ. ಏರ್ ಇಂಡಿಯಾಗೆ ಡಿಜಿಸಿಎ ನಿರ್ದೇಶಕರು ನೋಟಿಸ್ ಜಾರಿ ಮಾಡಿ, ಪೈಲಟ್ ಗಳು ಮತ್ತು ಕ್ಯಾಬಿನ್ ಸಿಬ್ಬಂದಿಯಿಂದ ಕರ್ತವ್ಯ ಲೋಪವಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ವಿಮಾನದಲ್ಲಿ ಅಶಿಸ್ತಿನ ಪ್ರಯಾಣಿಕರ ನಿರ್ಬಂಧಿಸಬೇಕಿತ್ತು. ಏರ್ ಇಂಡಿಯಾ ನಡವಳಿಕೆಗಳು ವೃತ್ತಿಪರವಾಗಿಲ್ಲ ಎಂದು ಡಿಜಿಸಿಎ ನಿರ್ದೇಶಕರು ನೋಟಿಸ್ ಜಾರಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular