BREAKING : ಇಸ್ರೇಲ್ ಗೆ ಆಗಮಿಸಿದ ಅಮೆರಿಕ ಅಧ್ಯಕ್ಷ ‘ಜೋ ಬೈಡನ್’ : ಸ್ವಾಗತ ಕೋರಿದ ‘ಬೆಂಜಮಿನ್ ನೆತನ್ಯಾಹು’

ಅಮೆರಿಕ ಅಧ್ಯಕ್ಷ ಜೋ ಬೈಡನ್ ಇಸ್ರೇಲ್ ಗೆ ಆಗಮಿಸಿದ್ದು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವಾಗತ ಕೋರಿದ್ದಾರೆ.

ಟೆಲ್ ಆವೀವ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವಾಗತ ಕೋರಿ ಬರಮಾಡಿಕೊಂಡರು. ಇಸ್ರೇಲ್ಗೆ ಬೆಂಬಲ ಸೂಚಿಸುವುದಕ್ಕಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಇಂದು ಇಸ್ರೇಲ್ಗೆ ಆಗಮಿಸಿದ್ದಾರೆ.

ಇಸ್ರೇಲ್-ಹಮಾಸ್ ಸಂಘರ್ಷ ಮುಂದುವರೆದಿದ್ದು, 4000 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಗಾಜಾದಲ್ಲಿ ಹಮಾಸ್ ಬಂಡುಕೋರರನ್ನು ಗುರಿಯಾಗಿಸಿಕೊಂಡು ದಾಳಿ ಮುಂದುವರೆಸಿದ ಇಸ್ರೇಲ್ ಭೀಕರ ಹತ್ಯಾಕಾಂಡ ನಡೆಸಿದೆ.ಗಾಯಾಳುಗಳು ಮತ್ತು ಇತರ ಪ್ಯಾಲೆಸ್ಟೀನಿಯಾದವರಿಂದ ತುಂಬಿದ ಗಾಜಾ ನಗರದ ಆಸ್ಪತ್ರೆಯಲ್ಲಿ ಮಂಗಳವಾರ ಭಾರಿ ಸ್ಫೋಟ ಸಂಭವಿಸಿದ್ದು, 500ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read