HomeLive Newsಟಿ20 ವಿಶ್ವಕಪ್ 2024: ಇಂದು ಯು ಎಸ್ ಎ ಹಾಗೂ ಇಂಗ್ಲೆಂಡ್ ಮುಖಾಮುಖಿ

ಟಿ20 ವಿಶ್ವಕಪ್ 2024: ಇಂದು ಯು ಎಸ್ ಎ ಹಾಗೂ ಇಂಗ್ಲೆಂಡ್ ಮುಖಾಮುಖಿ

ಬೆಳಗಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಆಸ್ಟ್ರೇಲಿಯಾ ಎದುರು ಭರ್ಜರಿ ಜಯ ಸಾಧಿಸುವ ಮೂಲಕ ಹೊಸ ದಾಖಲೆ ಬರೆದಿದ್ದು ಹಲವಾರು ಹಿರಿಯ ಕ್ರಿಕೆಟ್ ಕ್ರಿಕೆಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ ಆಸ್ಟ್ರೇಲಿಯಾ ಸೆಮಿ ಫೈನಲ್ ಪ್ರವೇಶಿಸಬೇಕಾದರೆ ಮುಂದಿನ ಪಂದ್ಯದಲ್ಲಿ ಭಾರತದ ಎದುರು ಗೆಲ್ಲಲೇ ಬೇಕಾಗಿದೆ.

ಇಂದು ಟಿ20 ವಿಶ್ವಕಪ್ನ ಮತ್ತೊಂದು ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಯುಎಸ್ಎ ಮುಖಾಮುಖಿಯಾಗಲಿದ್ದು, ಇಂಗ್ಲೆಂಡ್ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಮೊನ್ನೆಯಷ್ಟೇ ದಕ್ಷಿಣ ಆಫ್ರಿಕಾ ಎದುರು ಕೇವಲ ಎಂಟು ರನ್ ಗಳಿಂದ ಸೋಲನುಭವಿಸಿರುವ ಇಂಗ್ಲೆಂಡ್ ತಂಡ ಈ ಪಂದ್ಯವನ್ನು ಗೆಲ್ಲಲೇ ಬೇಕಾಗಿದೆ.

ಒಟ್ಟಾರೆ ಈ ಗ್ರೂಪ್ನಲ್ಲಿ ಸೆಮಿಫೈನಲ್ ಗೆ ಲಗ್ಗೆ ಇಡಲು ದಕ್ಷಿಣ ಆಫ್ರಿಕಾ ಸೇರಿದಂತೆ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡ ಭರ್ಜರಿ ಹೋರಾಟ ನಡೆಸುತ್ತಿದೆ. ಇನ್ನು ಯು ಎಸ್ ಎ ತಂಡಕ್ಕೆ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡ ಸೋಲು ಕಂಡರೆ ಒಂದು ಅವಕಾಶವಿರಲಿದೆ. ಹಾಗಾಗಿ ಇಂದಿನ ಪಂದ್ಯ ಯಾವ ತಂಡ ಫೈನಲ್ ಗೆ ಹೋಗಬಹುದೆಂದು ನಿರ್ಧಾರ ಮಾಡಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular