ಜಾಹೀರಾತು ಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯ, ತಪ್ಪಿದ್ರೆ ಕಾನೂನು ಕ್ರಮ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಂಗಡಿ/ ಉದ್ದಿಮೆ/ಮಳಿಗೆಗಳು ಮತ್ತು ಸಂಘ-ಸಂಸ್ಥೆಗಳು ಅಥವಾ ಇತರೆ ಯಾವುದೇ ರೀತಿಯ ಪ್ರದರ್ಶನ ಫಲಕಗಳು, ಜಾಹೀರಾತು ಫಲಕಗಳು ಕನಿಷ್ಠ ಶೇ.60 ರಷ್ಟು ಕಡ್ಡಾಯವಾಗಿ ಕರ್ನಾಟಕದ ಆಡಳಿತ ಭಾಷೆಯಾದ ಕನ್ನಡದಲ್ಲಿ ಇರುವಂತೆ ನಾಮಫಲಕಗಳನ್ನು ಅಳವಡಿಸಿಕೊಳ್ಳುವಂತೆ ಪಾಲಿಕೆ ಆಯುಕ್ತರು ಸೂಚಿಸಿದ್ದಾರೆ.

ಯಾವುದೇ ದ್ವಿಭಾಷಾ ಅಥವಾ ಬಹುಭಾಷಾ ಫಲಕಗಳು ಇದ್ದಲ್ಲಿ ಗರಿಷ್ಠ ಪ್ರಮಾಣ ಶೇ. 60 ರಷ್ಟು ಕನ್ನಡದಲ್ಲಿಯೇ ಅಳವಡಿಸಿಕೊಳ್ಳಲು ಎಲ್ಲಾ ಅಂಗಡಿ ಮಾಲೀಕರುಗಳು ಕೂಡಲೇ ಕ್ರಮ ಕೈಗೊಳ್ಳುವುದು. ಕನ್ನಡ ಫಲಕಗಳನ್ನು ಪ್ರದರ್ಶಿಸಲು 15 ದಿನಗಳಲ್ಲಿ ಕ್ರಮವಹಿಸದೇ ಇದ್ದಲ್ಲಿ ಪಾಲಿಕೆಯ ಆರೋಗ್ಯ ವಿಭಾಗದಿಂದ ಜಂಟಿ ಸರ್ವೆಗಳನ್ನು ನಡೆಸಿ ಪ್ರತ್ಯೇಕವಾಗಿ ನಿಯಮಾನುಸಾರ ಅಂಗಡಿ/ ಉದ್ದಿಮೆ/ಮಳಿಗೆಗಳು ಮತ್ತು ಸಂಘ-ಸಂಸ್ಥೆಗಳು ಅಥವಾ ಇತರೆ ಯಾವುದೇ ರೀತಿಯ ಪ್ರದರ್ಶನ ಫಲಕಗಳು, ಜಾಹೀರಾತು ಫಲಕಗಳನ್ನು ಅಳವಡಿಸದೇ ಇರುವಂತಹ ಅಂಗಡಿಯ ಮಾಲೀಕರುಗಳಿಗೆ ಅಥವಾ ಸಂಬಂಧಪಟ್ಟಂತ ನಿಯಮ ಉಲ್ಲಂಘನೆ ಮಾಡುವವರಿಗೆ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸುವ ಮತ್ತು ಕರ್ನಾಟಕ ಕಾರ್ಪೋರೇಷನ್ ಕಾಯ್ದೆ 1976ರ ಸಂಬಂಧಪಟ್ಟ ವಿಧಿಗಳ ಅನ್ವಯದಂತೆ ಹಾಗೂ ಪ್ರಚಲಿತ ಕಾನೂನು ನಿಯಮಗಳಂತೆ ಕ್ರಮಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read