ವಾಹನ ಚಾಲನೆ ವೇಳೆ ‘ಮೊಬೈಲ್’ ಬಳಕೆ; ಬೆಚ್ಚಿ ಬೀಳಿಸುವಂತಿದೆ 2022 ರಲ್ಲಿ ಮೃತಪಟ್ಟವರ ಸಂಖ್ಯೆ….!

ವಾಹನ ಚಾಲನೆ ಮಾಡುವ ವೇಳೆ ಹಲವರು ಮೊಬೈಲ್ ಬಳಕೆ ಮಾಡುವ ಮೂಲಕ ಅಪಘಾತಕ್ಕೆ ಈಡಾಗುತ್ತಿದ್ದಾರೆ. ಈ ಕುರಿತು ಎಷ್ಟೇ ಅರಿವು ಮೂಡಿಸಿದರೂ, ದುರಂತ ಘಟನೆಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದರೂ ಮೊಬೈಲ್ ಬಳಕೆಗೆ ಕಡಿವಾಣ ಬೀಳುತ್ತಿಲ್ಲ.

ಇದೀಗ ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವಾಲಯವು ‘ಭಾರತದಲ್ಲಿ ರಸ್ತೆ ಅಪಘಾತಗಳು-2022’ ವರದಿಯನ್ನು ಸಿದ್ಧಪಡಿಸಿದ್ದು, ಇದರಲ್ಲಿ ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಕೆ ಕಾರಣಕ್ಕೆ ನಡೆದ ಅಪಘಾತದಿಂದಾಗಿ ಆದ ಸಾವುಗಳ ಸಂಖ್ಯೆ ಬೆಚ್ಚಿ ಬೀಳಿಸುವಂತಿದೆ.

2022 ರಲ್ಲಿ ಮೊಬೈಲ್ ಬಳಕೆ ಕಾರಣದಿಂದಾಗಿ 7,558 ಅಪಘಾತಗಳು ಸಂಭವಿಸಿದ್ದು, 3,395 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 2021 ಕ್ಕೆ ಹೋಲಿಸಿದರೆ 2022 ರಲ್ಲಿ ಮೊಬೈಲ್ ಬಳಕೆಯಿಂದ ಆದ ಅಪಘಾತ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡಾ 15.7 ರಷ್ಟು ಹೆಚ್ಚಳವಾಗಿದ್ದು, ಸಾವಿನ ಸಂಖ್ಯೆಯಲ್ಲೂ 13.8ರಷ್ಟು ಹೆಚ್ಚಳವಾಗಿದೆ.

ಇನ್ನು ಭಾರತದಲ್ಲಿ ಪ್ರತಿ ಗಂಟೆಗೆ 53 ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಪ್ರತಿ ಗಂಟೆಗೆ 19 ಮಂದಿ ಸಾವಿಗೀಡಾಗುತ್ತಿದ್ದಾರೆ. ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡಿದ ಕಾರಣಕ್ಕೆ 50,029 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 35,692 ಮಂದಿ ವಾಹನ ಚಾಲನೆ ಮಾಡುವವರಾಗಿದ್ದರೆ, 14,337 ಮಂದಿ ಹಿಂಬದಿ ಸೀಟಿನಲ್ಲಿ ಕುಳಿತವರಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read