HomeKarnatakaBIG NEWS : ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಇನ್ಮುಂದೆ ‘ನಂದಿನಿ’ ತುಪ್ಪ ಬಳಕೆ ಕಡ್ಡಾಯ :...

BIG NEWS : ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಇನ್ಮುಂದೆ ‘ನಂದಿನಿ’ ತುಪ್ಪ ಬಳಕೆ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪ್ರಸಾದ ತಯಾರಿಕೆಗೆ ಮತ್ತು ಎಲ್ಲಾ ಸೇವೆಗಳಿಗೆ ‘ನಂದಿನಿ’ ತುಪ್ಪ ಬಳಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ಮತ್ತು ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪ ವನ್ನು ಮಾತ್ರ ಬಳಸುವಂತೆ ಸೂಚಿಸಿದೆ.
ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ. ಹಾಗೂ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಿ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular