ಈ ಹೂಗಳನ್ನು ಬಳಸಿ ನಿಮ್ಮ ಆರೋಗ್ಯವನ್ನು ಉತ್ತಮವಾಗಿಸಿ

ಸಸ್ಯಗಳು, ತರಕಾರಿಗಳು, ಹಣ್ಣುಗಳು, ಬೀಜಗಳನ್ನು ಸೇವಿಸುವುದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಅದೇ ರೀತಿ ಹೂಗಳನ್ನು ಬಳಸಿ ಕೂಡ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾಗಿ ನಿಮ್ಮ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಈ ಹೂಗಳನ್ನು ಬಳಸಿ.

*ದಾಸವಾಳ : ದಾಸವಾಳ ಹೂ ರಕ್ತದೊತ್ತಡ ಸಮಸ್ಯೆಯನ್ನು ನಿವಾರಿಸುತ್ತದೆ. ಹಾಗಾಗಿ ದಾಸವಾಳ ಹೂಗಳನ್ನು ಒಣಗಿಸಿ ಪುಡಿ ಮಾಡಿ ಅದನ್ನು ನೀರಿನಲ್ಲಿ ಹಾಕಿ ಕುದಿಸಿ ಬೆಳಿಗ್ಗೆ ಮತ್ತು ಸಂಜೆ ಕುಡಿಯಿರಿ. ಇದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ. ಅಲ್ಲದೇ ಕೂದಲುದುರುವ ಸಮಸ್ಯೆ ನಿವಾರಣೆಯಾಗುತ್ತದೆ.

*ಮಾರಿಗೋಲ್ಡ್ : ಇದು ಉರಿಯೂತದ ಗುಣಗಳನ್ನು ಹೊಂದಿರುವುದರಿಂದ ಮಹಿಳೆಯರ ಮುಟ್ಟಿನ ಸಮಯದಲ್ಲಿ ಕಾಡುವ ನೋವನ್ನು ನಿವಾರಿಸುತ್ತದೆ. ಕಣ್ಣಿನ ಕೆಳಗೆ ಉಂಟಾಗುವ ನೋವನ್ನು ವಾಸಿಮಾಡುತ್ತದೆ. ಇದರ ಫೇಸ್ ಪ್ಯಾಕ್ ಬಳಸುವುದರಿಂದ ಚರ್ಮದ ಕಾಂತಿ ಹೆಚ್ಚಾಗುತ್ತದೆ.

*ಗುಲಾಬಿ : ಗುಲಾಬಿಯಿಂದ ತಯಾರಿಸಿದ ಗುಲ್ಕನ್ ನ್ನು ಸೇವಿಸುವುದರಿಂದ ಹೊಟ್ಟೆ ತಂಪಾಗುತ್ತದೆ. ಅಲ್ಲದೇ ಇದು ಪಿಸಿಓಎಸ್, ಮೂಗು ತುರಿಸುವುದು, ತಲೆತಿರುಗುವಿಕೆ, ಮುಂತಾದ ರೋಗಗಳನ್ನು ಗುಣಪಡಿಸುತ್ತದೆ. ಹಾಗಾಗಿ ಈ ಹೂವಿನ ದಳಗಳನ್ನು ಪುಡಿಮಾಡಿ ಹಾಲಿನಲ್ಲಿ ಬೆರೆಸಿ ಕುಡಿಯಿರಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read