HomeLatest Newsಗ್ರಾಮೀಣ ಭಾಗದ ಮಹಿಳೆಯರಿಗೆ ಉಪಯುಕ್ತ ಮಾಹಿತಿ : ಹೊಲಿಗೆ ತರಬೇತಿಗಾಗಿ ಅರ್ಜಿ ಅಹ್ವಾನ

ಗ್ರಾಮೀಣ ಭಾಗದ ಮಹಿಳೆಯರಿಗೆ ಉಪಯುಕ್ತ ಮಾಹಿತಿ : ಹೊಲಿಗೆ ತರಬೇತಿಗಾಗಿ ಅರ್ಜಿ ಅಹ್ವಾನ

ಬಳ್ಳಾರಿ :   ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ವಲಯದ ವಿಶೇಷ ಘಟಕ ಯೋಜನೆಯಡಿ 37 ಮತ್ತು ಗಿರಿಜನ ಉಪಯೋಜನೆಯಡಿ 12 ಸೇರಿ ಒಟ್ಟು 49 ಗ್ರಾಮೀಣ ಭಾಗದ ಮಹಿಳಾ ಅಭ್ಯರ್ಥಿಗಳಿಗೆ ಹೊಲಿಗೆ ತರಬೇತಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ತರಬೇತಿ, ಶಿಷ್ಯವೇತನ ರಹಿತ, ಒಂದು ತಿಂಗಳ ಉಚಿತ ವಸತಿಯೊಂದಿಗೆ ತರಬೇತಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ಮಹಿಳಾ ಅಭ್ಯರ್ಥಿಗಳಿಗೆ ಉಚಿತ ವಿದ್ಯುತ್‌ಚಾಲಿತ ಹೊಲಿಗೆಯಂತ್ರ ವಿತರಿಸಲಾಗುವುದು.

2025-26ನೇ ಸಾಲಿನ ವೃತ್ತಿನಿರತ ಕುಶಲ ಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಬಳ್ಳಾರಿ ಜಿಲ್ಲೆಯ ಗ್ರಾಮೀಣ ಭಾಗದ ವೃತ್ತಿನಿರತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಉಚಿತವಾಗಿ 233 ವಿದ್ಯುತ್‌ಚಾಲಿತ ಹೊಲಿಗೆ ಯಂತ್ರ ವಿತರಿಸಲು ಉದ್ದೇಶಿಸಲಾಗಿದ್ದು, ಆಸಕ್ತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ಫೆ.20 ಕೊನೆಯ ದಿನ. ಅರ್ಜಿ ಸಲ್ಲಿಸಲು ಆನ್‌ಲೈನ್ ವೆಬ್‌ಸೈಟ್ ವಿಳಾಸ www.ballari.nic.in ಗೆ ಭೇಟಿ ನೀಡಬಹುದು.ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳು (ಬಳ್ಳಾರಿ- ಮೊ.9035547140, ಸಂಡೂರು ಮೊ.9844200579) ಅಥವಾ ದೂ.08392-242270 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಉಪನಿರ್ದೇಶಕರು(ಗ್ರಾ.ಕೈ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular