HomeIndiaBIG NEWS: ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ಸಾವಿನ ಸುದ್ದಿ ಸುಳ್ಳು: ಕುಟುಂಬ ಸ್ಪಷ್ಟನೆ

BIG NEWS: ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ಸಾವಿನ ಸುದ್ದಿ ಸುಳ್ಳು: ಕುಟುಂಬ ಸ್ಪಷ್ಟನೆ

ನವದೆಹಲಿ: ವಿಶ್ವವಿಖ್ಯಾತ ತಬಲಾ ವಾದಕ ಉಸ್ತಾದ್ ಝಾಕಿರ್ ಹುಸೇನ್ ಆರೋಗ್ಯ ಸಮಸ್ಯೆಯಿಂದಾಗಿ ಭಾನುವಾರ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಸೇನ್ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಕುಟುಂಬ ಸ್ಪಷ್ಟಪಡಿಸಿದೆ.

ಝಾಕೀರ್ ಹುಸೇನ್ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಗಣ್ಯಾತಿಗಣ್ಯರೆಲ್ಲ ಸಂತಾಪ ಸೂಚಿಸಿದ್ದರು. ಅಭಿಮಾನಿಗಳು, ಸಂಗೀತಾಸಕ್ತರು ಕಂಬನಿ ಮಿಡಿದಿದ್ದರು. ಅವರ ಕುಟುಂಬದಿಂದ ಸ್ಪಷ್ಟನೆ ನೀಡಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.

ಉಸ್ತಾದ್ ಝಾಕಿರ್ ಹುಸೇನ್ ಅವರು ತೀವ್ರ ಆರೋಗ್ಯ ಸಮಸ್ಯೆಗಳಿಂದಾಗಿ ಪ್ರಸ್ತುತ ಯುಎಸ್ಎಯ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಝಾಕಿರ್ ಹುಸೇನ್ ಆಸ್ಪತ್ರೆಗೆ ದಾಖಲಾದ ಸುದ್ದಿಯನ್ನು ಅವರ ಸೋದರ ಮಾವ ಖಚಿತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular