HomeKarnatakaಆಪ್ತನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಸ್ಪೀಕರ್ ಯು.ಟಿ. ಖಾದರ್

ಆಪ್ತನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಸ್ಪೀಕರ್ ಯು.ಟಿ. ಖಾದರ್

ಇತ್ತೀಚೆಗಷ್ಟೇ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಯು.ಟಿ. ಖಾದರ್, ತಮ್ಮ ಆಪ್ತ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಿ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಮಂಗಳೂರು ತಾಲೂಕು ಮುಡಿಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ ಭಾನುವಾರದಂದು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ ಯು.ಟಿ. ಖಾದರ್ ಶವಕ್ಕೆ ಹೆಗಲು ಕೊಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೆ ಮೃತರ ಸಂಬಂಧಿಗಳಿಗೆ ಸಾಂತ್ವಾನ ಹೇಳಿದ ಯು.ಟಿ. ಖಾದರ್, ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಕೋರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular