HomeKarnatakaಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್: SDPI ಮುಖಂಡ ಅರೆಸ್ಟ್

ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್: SDPI ಮುಖಂಡ ಅರೆಸ್ಟ್

ಮಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಎಸ್.ಡಿ.ಪಿ.ಐ. ಪಕ್ಷದ ಮುಖಂಡನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಸಾವರ್ಕರ್ ಫೋಟೋ ವಿಚಾರದಲ್ಲಿ ಯು.ಟಿ. ಖಾದರ್ ನೀಡಿದ ಹೇಳಿಕೆಯ ಬಗ್ಗೆ ಫೇಸ್ಬುಕ್ ನನಲ್ಲಿ ಎಸ್‌.ಡಿ.ಪಿ.ಐ. ಮುಖಂಡ ರಿಯಾಜ್ ಕಡಂಬು ಅವಹೇಳನಕಾರಿ ಪೋಸ್ಟ್ ಹಾಕಿದ್ದು, ಆತನನ್ನು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದು ಊರ್ವ ಠಾಣೆಯಲ್ಲಿ ವಿಚಾರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ತೆರವುಗೊಳಿಸುವ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು, ಸ್ವೀಕರ್ ಖಾದರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿ ನನ್ನ ಕೆಲಸ ಜೋಡಿಸುವುದು ಕಿತ್ತು ಬಿಸಾಕುವುದಲ್ಲ ಎಂದು ಹೇಳಿ ವಿವಾದ ತಣ್ಣಗಾಗಿಸಿದ್ದರು. ಖಾದರ್ ಅವರು ನೀಡಿದ ಹೇಳಿಕೆಯ ವಿರುದ್ಧ ಫೇಸ್ಬುಕ್ ನಲ್ಲಿ ರಿಯಾಜ್ ಕುಹಕದ ಪೋಸ್ಟ್ ಹಾಕಿದ್ದರು. ಕಾಂಗ್ರೆಸ್ ಮುಖಂಡರು ದೂರು ನೀಡಿದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular