HomeLatest Newsಕೋಚಿಂಗ್ ಸೆಂಟರ್‌ ನಲ್ಲಿ ಭಾರೀ ಸ್ಫೋಟ: ಇಬ್ಬರು ಸಾವು, ಹಲವರಿಗೆ ಗಾಯ

ಕೋಚಿಂಗ್ ಸೆಂಟರ್‌ ನಲ್ಲಿ ಭಾರೀ ಸ್ಫೋಟ: ಇಬ್ಬರು ಸಾವು, ಹಲವರಿಗೆ ಗಾಯ

ಫರೂಕಾಬಾದ್: ಉತ್ತರ ಪ್ರದೇಶದ ಫರೂಕಾಬಾದ್‌ನ ಕೋಚಿಂಗ್ ಸೆಂಟರ್‌ನಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ದಿ ಸನ್ ಕ್ಲಾಸಸ್ ಲೈಬ್ರರಿ ಎಂಬ ಕೋಚಿಂಗ್ ಸೆಂಟರ್‌ ನ ನೆಲ ಮಹಡಿಯಲ್ಲಿ ಸ್ಫೋಟ ಸಂಭವಿಸಿದ್ದು, ನಂತರ ಮೂರು ಅಗ್ನಿಶಾಮಕ ದಳದ ವಾಹನಗಳು ಮತ್ತು ಆಂಬ್ಯುಲೆನ್ಸ್ ಸ್ಥಳಕ್ಕೆ ಧಾವಿಸಿವೆ. ಗಾಯಗೊಂಡ ಐದು ಜನರನ್ನು ಲೋಹಿಯಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಮತ್ತು ಅವರನ್ನು ಮತ್ತೊಂದು ಆಸ್ಪತ್ರೆಗೆ ಕಳುಹಿಸಲಾಗಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್(ಡಿಎಂ) ಸೇರಿದಂತೆ ಹಿರಿಯ ಅಧಿಕಾರಿಗಳು ಘಟನೆಯ ಬಗ್ಗೆ ಮಾಹಿತಿ ಪಡೆಯಲು ಸ್ಥಳಕ್ಕೆ ಆಗಮಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಫೋಟದ ಹಿನ್ನೆಲೆಯಲ್ಲಿ ಆಡಳಿತವು ಹೆಚ್ಚಿನ ಸಂಖ್ಯೆಯ ಪಡೆಯನ್ನು ನಿಯೋಜಿಸಿದೆ. ಸ್ಫೋಟದ ಕಾರಣವನ್ನು ಕಂಡುಹಿಡಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಉನ್ನತ ಅಧಿಕಾರಿಗಳಿಗೆ ಸ್ಫೋಟದ ಸ್ಥಳಕ್ಕೆ ತಲುಪಲು ನಿರ್ದೇಶಿಸಿದ್ದಾರೆ. ಗಾಯಾಳುಗಳಿಗೆ ತಕ್ಷಣದ ಪರಿಹಾರ ಒದಗಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular