BREAKING: ಪಿಕ್ ಅಪ್ ಟ್ರಕ್ ಗೆ ಜೀಪ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು, 8 ಮಂದಿಗೆ ಗಾಯ

ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಪಿಕ್ ಅಪ್ ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಎಂಟು ಮಂದಿ ಗಾಯಗೊಂಡಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ,

ಅಪಘಾತದ ಕುರಿತು ಪ್ರತಿಕ್ರಿಯಿಸಿದ ಬಲ್ಲಿಯಾ ಎಸ್ಪಿ ದೇವ್ ರಂಜನ್ ವರ್ಮಾ, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತ ಸಂಭವಿಸಿದ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ವಿಚಾರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಬಲ್ಲಿಯಾದ ಬೈರಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೀಪ್, ಕಾರ್ ಮತ್ತು ಪಿಕಪ್ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸಂತ್ರಸ್ತರು ತಿಲಕ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಟ್ರಾಮಾ ಸೆಂಟರ್, ಬಿಹೆಚ್‌ಯುಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

https://twitter.com/ANI/status/1762306160613286052

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read