HomeLatest NewsBIG NEWS: ಡಬಲ್ ಡೆಕ್ಕರ್ ಬಸ್ ಪಲ್ಟಿ: ಇಬ್ಬರು ದುರ್ಮರಣ; ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

BIG NEWS: ಡಬಲ್ ಡೆಕ್ಕರ್ ಬಸ್ ಪಲ್ಟಿ: ಇಬ್ಬರು ದುರ್ಮರಣ; ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

ಇಟಾವಾ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಲಖನೌ-ಆಗ್ರಾ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ.

ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಕಂದಕ್ಕಕೆ ಉರುಳಿ ಬಿದ್ದಿದೆ. ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 50ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಟ್ರಕ್ ಹಿಂದಿಕ್ಕಲು ಹೋಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. ಬಸ್ಸಿನಲ್ಲಿ ಸಿಲುಕಿಕೊಂಡಿರುವವರ ರಕ್ಷಣೆಗೆ ಪೊಲೀಸರು ಹಾಗೂ ಹೆದ್ದಾರಿ ಭದ್ರತಾ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರನ್ನು ನೇಪಾಳದ ಬರ್ದಾ ನಿವಾಸಿ ಶೈದಾ (22) ಮತ್ತು ಬೊಹಾರದ ಮನೋಜ್ ಕುಮಾರ್ (52) ಎಂದು ಗುರುತಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular