ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಾಂಗ್ರೆಸ್ ನಾಯಕನ ವಿರುದ್ಧ ಕೇಸ್ ದಾಖಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕನ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಚಿನ್ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರೊಬ್ಬರ ವಿರುದ್ಧ ಭಾರತೀಯ ಜನತಾ ಪಕ್ಷದ ಯುವ ಘಟಕದ ನಾಯಕ ಅಕ್ಷಿತ್ ಅಗರ್ವಾಲ್ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರೊಬ್ಬರು ಕೆಲವು ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದಾರೆ ಎಂದು ಸಂಭಾಲ್ ಎಎಸ್ಪಿ ಶ್ರೀಶ್ ಚಂದ್ರ ಹೇಳಿದ್ದಾರೆ.

ಪ್ರಧಾನಿ ಮೋದಿಯವರ ವಿರುದ್ಧ ಅಸಭ್ಯ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿರುವ ಕಾಂಗ್ರೆಸ್ ನಾಯಕನ ವಿಡಿಯೋವನ್ನು ಸಹ ಒದಗಿಸಿರುವುದರಿಂದ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read