HomeIndiaಪತ್ರಕರ್ತನ ಮೇಲೆ ಗುಂಡಿನ ದಾಳಿ

ಪತ್ರಕರ್ತನ ಮೇಲೆ ಗುಂಡಿನ ದಾಳಿ

ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ಸ್ಥಳೀಯ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. 25 ವರ್ಷದ ಪತ್ರಕರ್ತರೊಬ್ಬರು ಶನಿವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ಪತ್ರಕರ್ತನನ್ನು ಮನು ಅವಸ್ತಿ ಎಂದು ಗುರುತಿಸಲಾಗಿದೆ. ಗಾಯಗೊಂಡ ಪತ್ರಕರ್ತನನ್ನು ಮೊದಲು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಕಾನ್ಪುರದ ಹ್ಯಾಲೆಟ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾನ್ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಅಪಾಯದಿಂದ ಪಾರಾಗಿದ್ದಾರೆ. ರಾತ್ರಿ 10.25ರ ಸುಮಾರಿಗೆ ಪಿಡಿ ನಗರದ ನಿವಾಸಿ ಮನು ಅವಸ್ತಿ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ದಾಳಿಯ ಹಿಂದಿನ ಉದ್ದೇಶ ತಕ್ಷಣವೇ ತಿಳಿದುಬಂದಿಲ್ಲ. ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular